ಬೆಂಗಳೂರು: ಕರ್ನಾಟಕ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇದ್ದ 186 ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು 1:3ರ ಅನುಪಾತದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧಪಡಿಸಿದೆ.

ಆಯಾ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಸಿದ್ಧಪಡಿಸಲಾದ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳು ಬನ್ನೇರುಘಟ್ಟ ರಸ್ತೆಯಲ್ಲಿರುವ ಕಾರ್ಮಿಕರ ಕಲ್ಯಾಣ ಮಂಡಳಿಯ ಕಲ್ಯಾಣ ಸುರಕ್ಷಾ ಭವನದಲ್ಲಿ ನಡೆಯುವ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು ಎಂದು ಮಂಡಳಿ ಕಾರ್ಯದರ್ಶಿ ಹೇಳಿದ್ದಾರೆ.

ಕಲ್ಯಾಣ ಅಧಿಕಾರಿ, ಕ್ಷೇತ್ರ ನಿರೀಕ್ಷಕ, ಆಪ್ತ ಸಹಾಯಕ, ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಅ.28ರಂದು ಹಾಗೂ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅ. 29ರಂದು ಬೆಳಿಗ್ಗೆ 10ರಿಂದ ದಾಖಲೆಗಳ ಪರಿಶೀಲನೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.