ಬೆಂಗಳೂರು: ‘ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಭೂಮಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಹಂಚಿಕೆ ಮಾಡಿರುವುದು ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗ ಅಲ್ಲವೇ’ ಎಂದು ರಾಜ್ಯಸಭೆ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನಿಸಿದ್ದಾರೆ.

ಈ ಕುರಿತು ‘ಎಕ್ಸ್’ನಲ್ಲಿ ಹೇಳಿಕೆ ನೀಡಿರುವ ಅವರು, ‘ಬೆಂಗಳೂರು ಸಮೀಪದ ‘ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್’ನಲ್ಲಿ ಭೂಮಿ ಹಂಚಿಕೆ ಮಾಡಲು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಇದೇ ಮಾರ್ಚ್‌ನಲ್ಲಿ ಒಪ್ಪಿಗೆ ನೀಡಿದ್ದಾರೆ. ಕೆಐಎಡಿಬಿ ಭೂಮಿ ಪಡೆಯಲು ಖರ್ಗೆ ಕುಟುಂಬ ಯಾವಾಗ ‘ಏರೋಸ್ಪೇಸ್ ಉದ್ಯಮಿಗಳಾದರು? ಸ್ವಹಿತಾಸಕ್ತಿ ಸಂಘರ್ಷಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ’ ಎಂದು ಟೀಕಿಸಿದ್ದಾರೆ.

‘ನಾಗರಿಕ ಸೌಲಭ್ಯಗಳಿಗೆ (ಸಿಎ) ಮೀಸಲಾದ 45.94 ಎಕರೆಯಲ್ಲಿ ಖರ್ಗೆ ಅವರ ಕುಟುಂಬ ನಡೆಸುತ್ತಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಐದು ಎಕರೆ ಮಂಜೂರು ಮಾಡಲಾಗಿದೆ. ಖರ್ಗೆ, ಅವರ ಪತ್ನಿ ರಾಧಾಬಾಯಿ ಖರ್ಗೆ, ಅವರ ಅಳಿಯನೂ ಆಗಿರುವ ಗುಲ್ಬರ್ಗ ಸಂಸದ ರಾಧಾಕೃಷ್ಣ, ಮತ್ತೊಬ್ಬ ಪುತ್ರ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮತ್ತೊಬ್ಬ ಮಗ ರಾಹುಲ್ ಖರ್ಗೆ ಟ್ರಸ್ಟಿಗಳಾಗಿದ್ದಾರೆ’ ಎಂದು ಅವರು ಮಾಹಿತಿ ಬಹಿರಂಗಪಡಿಸಿದ್ದಾರೆ.

‘ಅಕ್ರಮ ಹಂಚಿಕೆಯ ವಿಷಯ ಆರ್‌ಟಿಐ ಕಾರ್ಯಕರ್ತನ ಮೂಲಕ ಗೌರವಾನ್ವಿತ ರಾಜ್ಯಪಾಲರ ಕಚೇರಿಗೂ ತಲುಪಿದೆ. ಮೈಸೂರಿನ ವಿವಾದಿತ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಟ್ಟು ಕೊಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ, ಖರ್ಗೆ ಕುಟುಂಬವೂ ಅಕ್ರಮವಾಗಿ ಪಡೆದ ಭೂಮಿ ಬಿಟ್ಟು ಕೊಡಬೇಕಾಗುತ್ತದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.