‘ಪ್ರತ್ಯೇಕ ಕೋಶ ರಚಿಸಲು ಸಲಹೆ’
‘ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ (ಯುಕೆಪಿ) ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಮತ್ತು ಭೂಸ್ವಾಧೀನ ಆಯುಕ್ತರು ವ್ಯಾಜ್ಯ ನಿರ್ವಹಣಾ ಅಧಿಕಾರಿಯಾಗಿದ್ದಾರೆ. ಕೆಲವು ಪ್ರಕರಣಗಳಲ್ಲಿ ಸರ್ಕಾರಿ ವಕೀಲರ ಅಸಹಕಾರದಿಂದ ಮೇಲ್ಮನವಿ ಸಲ್ಲಿಸಲು ವಿಳಂಬವಾಗಿದೆ. ಅಲ್ಲದೆ, ಸರ್ಕಾರದ ವಾದವನ್ನು ಸರಿಯಾಗಿ ಮಂಡಿಸದೇ ಇರುವುದರಿಂದ ಸರ್ಕಾರದ ವಿರುದ್ಧವಾಗಿ ಹೈಕೋರ್ಟ್ ಆದೇಶ ಮಾಡುತ್ತಿದೆ’ ಎಂದು ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರು ವಿವರಣೆ ನೀಡಿದ್ದಾರೆ. ಜಿಲ್ಲಾ ನ್ಯಾಯಾಲಯಗಳು ಮತ್ತು ಹೈಕೋರ್ಟ್‌ನಲ್ಲಿ ಬಾಕಿ ಇರುವ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಂದು ಪ್ರತ್ಯೇಕ ಕೋಶ ರಚಿಸಬೇಕು ಮತ್ತು ಐವರು ಸರ್ಕಾರಿ ವಕೀಲರನ್ನು ಒಳಗೊಂಡ ತಂಡವನ್ನು ರಚಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ಮನವಿ ಮಾಡಬೇಕು ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಅದಕ್ಕೆ, ಜಲ ಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ‘ಕೆಲವು ಪ್ರಕರಣಗಳಲ್ಲಿ ಕೃಷ್ಣ ಭಾಗ್ಯ ಜಲ ನಿಗಮವು ಮೇಲ್ಮನವಿಯನ್ನೇ ಸಲ್ಲಿಸಿಲ್ಲ. ಅಂತಹ ಪ್ರಕರಣಗಳಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಜೆ.ಎಂ. ಗಂಗಾಂಧರ್ ಸೂಕ್ತ ಸಹಕಾರ ನೀಡುತ್ತಿದ್ದಾರೆ’ ಎಂದು ಸಮಜಾಯಿಷಿ ನೀಡಿದ್ದಾರೆ.