ಬೆಂಗಳೂರು: ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್. ಬನ್ನೂರ್‌ಮಠ ಅವರ ಐದು ವರ್ಷಗಳ ಅಧಿಕಾರ ಅವಧಿ ಇದೇ 19ಕ್ಕೆ ಕೊನೆಯಾಗಲಿದ್ದು, ಹೊಸ ಅಧ್ಯಕ್ಷರ ನೇಮಕಕ್ಕೆ ಕಾನೂನು ಇಲಾಖೆ ಪ್ರಕ್ರಿಯೆ ಆರಂಭಿಸಿದೆ.

ಬನ್ನೂರ್‌ಮಠ ಅವರು 2019ರ ಸೆ. 19ರಂದು ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಥವಾ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಯನ್ನು ರಾಜ್ಯ ಸರ್ಕಾರ ನೇಮಿಸಬೇಕಿದೆ. ಅಧ್ಯಕ್ಷರನ್ನು ನಾಮನಿರ್ದೇಶನ ಮಾಡುವಂತೆ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರಿಗೆ ಇಲಾಖೆ ಪ್ರಸ್ತಾವ ಸಲ್ಲಿಸಿದ್ದು, ಮುಖ್ಯಮಂತ್ರಿಯ ಅನುಮೋದನೆಯ ಬಳಿಕ ಸಚಿವ ಸಂಪುಟಕ್ಕೆ ಈ ಪ್ರಸ್ತಾವ ಮಂಡನೆ ಆಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಮಧ್ಯೆ, ಆಯೋಗದ ಅಧ್ಯಕ್ಷರು, ಸದಸ್ಯರು ಮತ್ತು ಸದಸ್ಯ ಕಾರ್ಯದರ್ಶಿಗಳ ನೇಮಕಾತಿಗೆ ಸಂಬಂಧಿಸಿದಂತೆ ಗರಿಷ್ಠ ವಯೋಮಿತಿಯನ್ನು 70 ವರ್ಷಕ್ಕೆ ನಿಗದಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಅನುಮೋದನೆ ನೀಡಿದ್ದಾರೆ. ಈವರೆಗೆ ಗರಿಷ್ಠ ವಯೋಮಿತಿ ನಿಗದಿಪಡಿಸಿರಲಿಲ್ಲ. ಹೀಗಾಗಿ, ಈ ಅಂಶವನ್ನು ಪರಿಗಣಿಸಿ ನಾಮ ನಿರ್ದೇಶನ ಮಾಡಬೇಕಾಗಿದೆ ಎಂದೂ ಇಲಾಖೆಯ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.