ಬೆಂಗಳೂರು: ಕುಲಪತಿ ಪ್ರೊ.ಸುಧೀರ್ ಕೃಷ್ಣಸ್ವಾಮಿ ಅವರು ಅಧಿಕಾರ ಸ್ವೀಕರಿಸುವುದನ್ನು ತಡೆದು, ವಿಳಂಬ ಮಾಡಿದರು ಎಂಬ ಆರೋಪ ಎದುರಿಸುತ್ತಿರುವ ನ್ಯಾಷನಲ್ ಲಾ ಸ್ಕೂಲ್ ಇಂಡಿಯಾ ಯೂನಿವರ್ಸಿಟಿ ಕುಲಸಚಿವ ಪ್ರೊ.ಒ.ವಿ.ನಂದಿಮಠ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ಮಂಡಳಿಗೆ ಶನಿವಾರ ರಾಜೀನಾಮೆ ಸಲ್ಲಿಸಿರುವ ಬಗ್ಗೆ ವಿದ್ಯಾರ್ಥಿಗಳಿಗೆ ವಾಟ್ಸ್ಆಪ್ ಸಂದೇಶ ಕಳುಹಿಸಿದ್ದಾರೆ.

ಕುಲಪತಿ ನೇಮಕ ಪ್ರಕ್ರಿಯೆ ಏಕೆ ವಿಳಂಬವಾಯಿತು ಎಂದು ತಿಳಿಸುವ ಸಲುವಾಗಿ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನು ಭೇಟಿ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅವರು ಭೇಟಿ ಮಾಡದೆ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಪ್ರೊ.ನಂದಿಮಠ ಅವರು ಏಳು ವರ್ಷಗಳಿಂದ ಕುಲಸಚಿವರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.