ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌ಗಳನ್ನು ಅಳವಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

₹109.91 ಕೋಟಿ ಅಂದಾಜು ವೆಚ್ಚದಲ್ಲಿ ಈ ಯೋಜನೆಯನ್ನು ಜಾರಿಗೆ ತರಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮೈಸೂರಿನಲ್ಲಿ ಪೈಲಟ್ ಯೋಜನೆಯಾಗಿ ಜಾರಿ ಮಾಡುತ್ತಿದ್ದು, ಇಲ್ಲಿ ಯಶಸ್ವಿಯಾದರೆ ರಾಜ್ಯ ಎಲ್ಲ ನಗರ ಮತ್ತು ಪಟ್ಟಣಗಳಿಗೂ ಎಲ್‌ಇಡಿ ಬಲ್ಬ್‌ಗಳನ್ನೇ ಅಳವಡಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಮೈಸೂರಿನಲ್ಲಿ ಎಲ್‌ಇಡಿ ಬಲ್ಬ್‌ಗಳನ್ನು ಅಳವಡಿಸುವುದರಿಂದ ವಾರ್ಷಿಕ ₹58 ಕೋಟಿ ವಿದ್ಯುತ್ ಕಂಪನಿಗೆ ಉಳಿತಾಯವಾಗುತ್ತದೆ ಎಂದು ಹೇಳಿದರು.

ಮೈಸೂರು ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಿಸಲು ಕಾಮಗಾರಿಯ ಪರಿಷ್ಕೃತ ಅಂದಾಜು ಪಟ್ಟಿ ₹84.69 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಿಂದ 453 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ ಎಸ್.ಎಂ.ಕೃಷ್ಣ ನಗರ ವಸತಿ ಬಡಾವಣೆಯಲ್ಲಿ ವಿದ್ಯುತ್ ವಿತರಣಾ ಕೇಂದ್ರವನ್ನು ₹15.34 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.