ಬೆಂಗಳೂರು: ವಿಧಾನಪರಿಷತ್ನ ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಒಟ್ಟು ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಆರಂಭವಾಗಿದೆ.

ಯಾವುದೇ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ. ಆದರೆ, ಮೊದಲ ದಿನ ಈಶಾನ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರರೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮಗೊಳಿಸಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಇನ್ನೂ ಅಭ್ಯರ್ಥಿಗಳ ಆಯ್ಕೆ ನಡೆಸಿಲ್ಲ. ಬಿಜೆಪಿ ಇದೇ 11ರಂದು ಸಭೆ ನಡೆಸಿ ಅದೇ ದಿನಗಳ ಅಭ್ಯರ್ಥಿಗಳನ್ನು ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.

ಈ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಯುವ ಸಾಧ್ಯತೆಗಳು ಇವೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದರು. 11ರಂದು ಬಿಜೆಪಿ ನಾಯಕರ ಸಭೆಯ ಬಳಿಕ ಮೈತ್ರಿ ಸಂಬಂಧ ಜೆಡಿಎಸ್ ನಾಯಕರ ಜತೆಗೂ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಪಕ್ಷದ ವರಿಷ್ಠರು ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಮಗ್ನರಾಗಿರುವಾಗ ಅವರಿಂದ ಪಟ್ಟಿಗೆ ಒಪ್ಪಿಗೆ ಪಡೆದುಕೊಂಡು ಬರಬೇಕಾಗಿದೆ. ಈಗಾಗಲೇ ಸಂಭಾವ್ಯರ ಪಟ್ಟಿಯೊಂದನ್ನು ದೆಹಲಿಗೆ ಕಳುಹಿಸಲಾಗಿದೆ. ಔಪಚಾರಿಕವಾಗಿ ಒಪ್ಪಿಗೆ ಪಡೆಯಬೇಕಾಗಿದೆ. ಈ ಮಧ್ಯೆ ಪ್ರತಿಯೊಂದು ಕ್ಷೇತ್ರಕ್ಕೂ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.