ಬೆಂಗಳೂರು: ರಾಹುಲ್ ಖರ್ಗೆ ಅವರ ಮಾದರಿಯಲ್ಲೇ ಬಿಜೆಪಿ ಹಾಗೂ ಆರ್ಎಸ್ಎಸ್ ತಮಗೆ ಹಂಚಿಕೆಯಾಗಿದ್ದ ಜಮೀನು, ನಿವೇಶನಗಳನ್ನು ಹಿಂದಿರುಗಿಸಿ ರಾಜ್ಯದ ಜನರಿಗೆ ಆದರ್ಶವಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ.

ಸಿದ್ಧಾರ್ಥ ವಿಹಾರ ಟ್ರಸ್ಗೆ ನಿಯಮಾನುಸಾರ ಹಂಚಿಕೆಯಾಗಿದ್ದ ಐದು ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಅನುಸರಿಸಿದ ನಡೆಯನ್ನೇ ಬಿಜೆಪಿ ಮತ್ತು ಆರ್ಎಸ್ಎಸ್ ಅನುಸರಿಸಬೇಕು ಎನ್ನುವುದು ಎಲ್ಲರ ಆಶಯ ಎಂದಿದ್ದಾರೆ.

ಐದು ದಶಕಗಳಿಂದಲೂ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗಿದೆ. ನಿರುದ್ಯೋಗಿಗಳಿಗೆ ತರಬೇತಿ ಮತ್ತು ಸಂಶೋಧನಾ ತರಬೇತಿ ನೀಡಲು ಬಹುಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ನೀವೇಶನ ಪಡೆಯಲಾಗಿತ್ತು. ಕಾನೂನು ಬದ್ಧವಾಗಿ ಪೂರ್ತಿ ಹಣ ಪಾವತಿಸಲಾಗಿತ್ತು. ಸುಳ್ಳು ಹಾಗೂ ಅಪಪ್ರಚಾರಕ್ಕೆ ಸಿಲುಕಬಾರದು ಎಂಬ ಕಾರಣಕ್ಕೆ ನ್ಯಾಯಬದ್ಧವಾಗಿ ಲಭ್ಯವಾಗಿದ್ದ ಜಮೀನನ್ನು ಹಿಂದಿರುಗಿಸಿ ಮೇಲ್ಪಂಕ್ತಿ ಹಾಕಿದ್ದಾರೆ. ಸದಾ ‘ಮೊಸರಲ್ಲಿ ಕಲ್ಲು ಹುಡುಕುವ’ ಪ್ರತಿಪಕ್ಷಗಳು ತಾವು ಅದೇ ಮಾದರಿಯಲ್ಲಿ ನಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ಬಿರಿಯಾನಿ ಹೋಟೆಲ್ಗೆ ಜಾಗ: ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಶಿಕ್ಷಣ ಸಂಸ್ಥೆ ಸ್ಥಾಪಿಸುವುದಾಗಿ ಕರ್ನಾಟಕ ಗೃಹ ಮಂಡಳಿಯಿಂದ ನಿವೇಶನ ಪಡೆದು ಈಗ ಆ ಜಾಗದಲ್ಲಿ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆ. ಅವರೂ ನಿವೇಶನ ಹಿಂದಿರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಸರ್ಕಾರ ದೇವನಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ 116 ಎಕರೆ ಭೂಮಿಯನ್ನು ಕೇವಲ ₹ 50 ಕೋಟಿಗೆ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಹಂಚಿಕೆ ಮಾಡಲಾಗಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು ₹137 ಕೋಟಿ ನಷ್ಟವಾಗಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಬಳ್ಳಾರಿಯ ಕುವೆಂಪು ನಗರದ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಕ್ಕೆ ಮೀಸಲಿಟ್ಟ ಬೆಲೆಬಾಳುವ ನಿವೇಶನವನ್ನು ರಾಷ್ಟ್ರೋತ್ಥಾನ ಪರಿಷತ್ಗೆ ಶೇ 25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಲಾಗಿತ್ತು. ಇದರಿಂದ ಸರ್ಕಾರಕ್ಕೆ ₹7.50 ಕೋಟಿ ನಷ್ಟವಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರದವರು ರಾಜ್ಯದ ವಿವಿಧೆಡೆ ಗೋಮಾಳ ಜಾಗವನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ. ಈ ಎಲ್ಲ ಜಮೀನು, ನಿವೇಶನಗಳನ್ನೂ ಆರ್ಎಸ್ಎಸ್ ವಾಪಸ್ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.