ಮೈಸೂರು: ಬಿಜೆಪಿಯಲ್ಲೇ ಬಹಳ ಭ್ರಷ್ಟಾಚಾರಿಗಳಿದ್ದು, ಅವರ ಮೇಲೆ ಪ್ರಧಾನಿ ಮೋದಿಯವರು ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಮೋದಿ ಅವರು ಪ್ರಸ್ತಾಪಿಸಿದ ಬಗ್ಗೆ ಇಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ; ಅಲ್ಲಿಗೆ ಭೇಟಿಯನ್ನೂ ನೀಡಲಿಲ್ಲವೇಕೆ ಎಂದು ಪ್ರಶ್ನಿಸಿದರು.

ಸುಳ್ಳು ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ ಎಂದರು.

ಪೊನ್ನಣ್ಣ ನನ್ನ ಕಾನೂನು ಸಲಹೆಗಾರರಾಗಿರುವುದರಿಂದ, ಪ್ರತಿ ದಿನ ಅವರೊಂದಿಗೆ ಕಾನೂನಿನ ಚರ್ಚೆ ನಡೆಸುತ್ತೇನೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.