ಭಾನುವಾರ, 30 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಕೆಶಿಗೆ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲಿ: ಚಂದ್ರಶೇಖರ ಸ್ವಾಮೀಜಿ

Published 27 ಜೂನ್ 2024, 7:46 IST
Last Updated 27 ಜೂನ್ 2024, 7:46 IST
ಅಕ್ಷರ ಗಾತ್ರ

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅನುಭವ ಪಡೆದಿದ್ದಾರೆ. ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅಗ್ರಹಿಸಿದರು.

ನಗರದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಎದುರೇ ಅವರು ಮಾತನಾಡಿದರು.

ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಮಾತ್ರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ ಎಂದರು.

ಬೆಂಗಳೂರು ಒಂದಾಗಿ ಉಳಿಯಬೇಕು. ಅದನ್ನು ಭಾಗ ಮಾಡುವ ಪ್ರಯತ್ನ ಹಿಂದೆ ನಡೆದಿತ್ತು. ಹೋರಾಟದ ಮೂಲಕ ಅದನ್ನು ತಡೆಯಲು ಸಾಧ್ಯವಾಗಿತ್ತು. ಈಗ ಮತ್ತೆ ಭಾಗ ಮಾಡುವ ಕೂಗು ಎದ್ದಿದೆ. ದಯವಿಟ್ಟು ಭಾಗ ಮಾಡಬಾರದು ಎಂದು ಮನವಿ ಮಾಡಿದರು.

ಇಬ್ಬಾಗ ಮಾಡಬೇಕು ಎಂದಿದ್ದರೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ಮಾಡಿ. ಆಗ ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತದೆ. ಈಗ ಉತ್ತರ ಕರ್ನಾಟಕದವರು ಬೆಂಗಳೂರು ಸೇರಿರುವುದರಿಂದ ಅಲ್ಲಿ ಅಭಿವೃದ್ಧಿ ಆಗಿಲ್ಲ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT