ಕೊಪ್ಪಳ: ತುಂಗಭದ್ರಾ ಜಲಾಶಯವನ್ನು ನಿರ್ವಹಣೆ ಮಾಡುವವರು ಯಾರು? ಈ ಕೆಲಸ ಮಾಡುವ ಗುತ್ತಿಗೆದಾರನಿಗೆ ಎಷ್ಟು ಹಣ ಸಂದಾಯವಾಗಿದೆ ಎನ್ನುವ ಮಾಹಿತಿಯನ್ನು ಸರ್ಕಾರ ಬಹಿರಂಗ ಮಾಡಬೇಕು ಎಂದು ಶಾಸಕ ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ.

ತಾಲ್ಲೂಕಿನ ಮುನಿರಾಬಾದ್‌ನಲ್ಲಿರುವ ಜಲಾಶಯಕ್ಕೆ ಭಾನುವಾರ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಯಾರ ಬೇಜವಾಬ್ದಾರಿಯಿಂದ ಗೇಟ್ ಕೊಚ್ಚಿಕೊಂಡು ಹೋಗಿದೆ. ಈ ಕುರಿತು ಸಿಬಿಐ ತನಿಖೆ ನಡೆಯಬೇಕು. ಜಲಾಶಯದ ವಾರ್ಷಿಕ ನಿರ್ವಹಣೆ ಗುತ್ತಿಗೆದಾರರು ಯಾರು? ಅವರಿಗೆ ಪಾವತಿಯಾದ ಹಣ ಎಷ್ಟು ಎನ್ನುವುದು ಗೊತ್ತಾಗಬೇಕು. ಜಲಾಶಯದ ನೀರು ಹೊರಬಿಡುತ್ತಿರುವ ಕಾರಣ ನಮ್ಮ ಭಾಗದ ರೈತರಿಗೆ ದೊಡ್ಡ ಅನ್ಯಾಯವಾಗುತ್ತದೆ. ಸರ್ಕಾರವೇ ಸಂಪೂರ್ಣ ಜವಾಬ್ದಾರಿ ಹೊರಬೇಕು’ ಎಂದು ಆಗ್ರಹಿಸಿದರು.
.ತುಂಗಭದ್ರಾ | ಗೇಟ್ ಮುರಿದು ನದಿಗೆ ಭಾರಿ ನೀರು: ಬಳ್ಳಾರಿ ಜಿಲ್ಲಾಡಳಿತ ಕಟ್ಟೆಚ್ಚರ.ತುಂಗಭದ್ರಾ ಜಲಾಶಯ | 4 ದಿನಗಳಲ್ಲಿ ಗೇಟ್ ಸಿದ್ಧವಾಗಲಿದೆ: ಕಾಡಾ ಅಧ್ಯಕ್ಷ ದೋಟಿಹಾಳ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.