ಬೆಂಗಳೂರು: ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ ಕಿವಿಗೊಡದೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

17ನೇ ಶತಮಾನದ ಮೈಸೂರು ಸಂಸ್ಥಾನದ ಮುಸ್ಲಿಂ ದೊರೆ ಟಿಪ್ಪು ಸುಲ್ತಾನ್ ಅವರ ಜಯಂತಿಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

‘ಅಪ್ರತಿಮ ಸ್ವಾತಂತ್ರ್ಯ ಸೇನಾನಿ, ದಕ್ಷ ಆಡಳಿತಗಾರ ಮತ್ತು ಜಾತ್ಯತೀತನಾಗಿ ಸರ್ವರನ್ನೂ ಪೊರೆದ ಟಿಪ್ಪು ಸುಲ್ತಾನ್ ನಾಡಿನ ಹೆಮ್ಮೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ ಕಿವಿಗೊಡದೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ. ನಾಡ ಬಂಧುಗಳಿಗೆ ಟಿಪ್ಪು ಜಯಂತಿಯ ಶುಭಾಶಯಗಳು’ ಎಂದು ಅವರು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.