ಬೆಂಗಳೂರು: ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿರುವ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀಕರಣಗೊಳಿಸದಂತೆ ಕೇರಳ ಮುಖ್ಯಮಂತ್ರಿಗೆ ಶೀಘ್ರ ಪತ್ರ ಬರೆಯಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಮುಖ್ಯಮಂತ್ರಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಭೇಟಿ ಮಾಡಿದ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ, ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿರುವ ಗ್ರಾಮಗಳ ಹೆಸರನ್ನು ಮಲಯಾಳಿ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸುತ್ತಿರುವ ಬಗ್ಗೆ ಗಮನಕ್ಕೆ ತಂದರು.

ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ, ‘ಈ ವಿಷಯ ಈಗಾಗಲೇ ನನ್ನ ಗಮನಕ್ಕೂ ಬಂದಿದೆ. ಕಾಸರಗೋಡು ಮತ್ತು ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳ ಭಾಷಿಗರು ಪರಸ್ಪರ ಸಹಬಾಳ್ವೆಯಿಂದ ಸಹೋದರರಂತೆ ಬದುಕು ನಿರ್ವಹಿಸುತ್ತಿದ್ದು, ಕನ್ನಡ ಭಾಷೆಯ ಸಾಂಸ್ಕೃತಿಕ, ಐತಿಹಾಸಿಕ ಮಹತ್ವವುಳ್ಳ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂದು ಕೇರಳದ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು. ಅಲ್ಲದೆ, ಗ್ರಾಮಗಳ ಹೆಸರುಗಳ ಬದಲಾವಣೆ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಪತ್ರ ಬರೆದು ಮನವಿ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಪ್ರಯತ್ನ ಕೇರಳ ಸರ್ಕಾರದ ಗಮನಕ್ಕೆ ಬಾರದೆಯೇ ಕೇವಲ ಸ್ಥಳೀಯ ಸಂಸ್ಥೆಗಳ ಹಂತದಲ್ಲಿಯೇ ನಡೆದಿರಬಹುದೆಂಬ ವಿಷಯವನ್ನು ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷರು ಮುಖ್ಯಮಂತ್ರಿಯ ಗಮನಕ್ಕೆ ತಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.