ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಲೋಕದಲ್ಲಿ ಬಲು ಅಪರೂಪದ ಹಂಪನಾ ದಂಪತಿಗಳ ಜೋಡಿಯ ಕೊಡುಗೆ ಅನುಪಮವಾದುದು. ಕರ್ನಾಟಕದ ಅಗ್ರಗಣ್ಯ ಮಹಿಳಾ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಅವರ ನಿಧನಕ್ಕೆ ಸಂತಾಪ ಕೋರುತ್ತೇನೆ. ನಾಡು ನುಡಿಯ ಬಗೆಗಿನ ಅನುಪಮ ಪ್ರೀತಿ, ನಿರಂತರ ಪರಿಶ್ರಮ ಅವರ ಸಾಹಿತ್ಯಿಕ ಸಾಧನೆಯಿಂದಲೇ ಕನ್ನಡ ಸಾಹಿತ್ಯ ಲೋಕದಲ್ಲಿ ಅಚ್ಚಳಿಯದ… pic.twitter.com/T77LfmQOty
— Vijayendra Yediyurappa (@BYVijayendra) June 22, 2024
ನಾಡಿನ ಖ್ಯಾತ ಸಾಹಿತಿಗಳು ಹಾಗೂ ನಾಡೋಜ ಡಾ. ಕಮಲಾ ಹಂಪನಾ ಅವರ ನಿಧನದ ಸುದ್ದಿ ಅತ್ಯಂತ ನೋವಿನ ಸಂಗತಿ. ಅವರ ಅಗಲಿಕೆಗೆ ನನ್ನ ಸಂತಾಪಗಳು. ತಮ್ಮ ಲೇಖನಗಳು, ಸಂಶೋಧನೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಭಾಜನರಾಗಿದ್ದರು. ಮೂಡಬಿದಿರೆಯಲ್ಲಿ ನಡೆದ 71 ನೇ ಅಖಿಲ… pic.twitter.com/lqKBex5ZmP
ಖ್ಯಾತ ಸಾಹಿತಿ ಡಾ.ಕಮಲಾ ಹಂಪನಾ ನಿಧನರಾದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿ ಎನಿಸಿದ್ದ ನಾಡೋಜ ಕಮಲ ಹಂಪನಾ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕ ಹಿರಿಯ ಲೇಖಕಿಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತೇನೆ, ಅವರ ಕುಟುಂಬದವರು, ಅಭಿಮಾನಿಗಳಲ್ಲಿ ಸಂತಾಪ ವ್ಯಕ್ತಪಡಿಸುತ್ತೇನೆ. pic.twitter.com/1pOKCGDq2H