ಬೆಂಗಳೂರು: ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಇದೇ 8ರಿಂದ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ರಾಜ್ಯದಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಇದೇ 8 ರಿಂದ ಆರಂಭಿಸಲು ನಿರ್ಧರಿಸಿದ ಬೆನ್ನಲ್ಲೇ, ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕೊರೊನಾ ಸೋಂಕು ದೃಢ ಪ್ರಮಾಣ ಶೇ 2ಕ್ಕಿಂತ ಕಡಿಮೆ ಇರುವ ತಾಲ್ಲೂಕುಗಳಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 9.30 ರಿಂದ ಅಪರಾಹ್ನ 3.30 ರವರೆಗೆ ಎಲ್ಕೆಜಿ, ಯುಕೆಜಿ ತರಗತಿಗಳನ್ನು ನಡೆಸಲು ವೇಳಾಪಟ್ಟಿ ನಿಗದಿಪಡಿಸಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ಆಯುಕ್ತರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ದೃಢ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗಿದೆ. ಹೀಗಾಗಿ, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2020–21) 9 ಮತ್ತು 10ನೇ ತರಗತಿಯನ್ನುಆಗಸ್ಟ್ 23 ರಿಂದ, 6 ರಿಂದ 8ರವರೆಗಿನ ತರಗತಿಗಳನ್ನುಸೆ. 6ರಿಂದ ಆರಂಭಿಸಲಾಗಿದೆ. ಅ.4ರಿಂದ 6 ರಿಂದ 10ರವರೆಗಿನ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿವೆ. 1ರಿಂದ 5ರವರೆಗಿನ ತರಗತಿಯನ್ನು ಅ.25 ರಿಂದ ಆರಂಭಿಸಿ, ಮೊದಲ ಒಂದು ವಾರ ಅರ್ಧ ದಿನ, ನ. 2ರಿಂದ ಪೂರ್ಣ ಪ್ರಮಾಣದಲ್ಲಿ ನಡೆಸಲಾಗುತ್ತಿದೆ.

ಇದೀಗ ಅಂಗನವಾಡಿ ಕೇಂದ್ರಗಳನ್ನು ಮತ್ತು ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದರಿಂದ, ಶೈಕ್ಷಣಿಕ ಚಟುವಟಿಕೆ ಸಂಪೂರ್ಣವಾಗಿ ಆರಂಭಗೊಂಡಂತಾಗಿದೆ.

ಎಲ್ಕೆಜಿ, ಯುಕೆಜಿ: ಮಕ್ಕಳಿಗೆ ಮನೆಯಿಂದಲೇ ಉಪಾಹಾರ ಮತ್ತು ಶುದ್ಧ ಕುಡಿಯುವ ನೀರು ಕಳುಹಿಸುವಂತೆ ಪೋಷಕರಿಗೆ ತಿಳಿಸಬೇಕು. ಅವಶ್ಯಕತೆಗೆ ಅನುಸಾರವಾಗಿ ಎಲ್ಲ ಶಾಲೆಗಳಲ್ಲಿ ಶುದ್ಧ ಬಿಸಿನೀರಿನ ವ್ಯವಸ್ಥೆ ಮಾಡಬೇಕು. ಮಕ್ಕಳ ಹಾಜರಾತಿ ಆಧರಿಸಿ ಪ್ರತಿ ತರಗತಿಯಲ್ಲಿ ಪ್ರತ್ಯೇಕವಾಗಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡುವ ಮೂಲಕ ವೈಯಕ್ತಿಕ ಅಂತರ ಕಾಪಾಡಬೇಕು. ಪರಸ್ಪರ ಒಂದು ಮೀಟರ್ ಅಂತರ ಪಾಲಿಸುವಂತೆಯೂ ಎಚ್ಚರ ವಹಿಸಬೇಕು. ಯಾವುದೇ ವಿದ್ಯಾರ್ಥಿಗೆ ಕೆಮ್ಮು, ಜ್ವರ, ನೆಗಡಿ, ಮೂಗು ಸೋರುವುದು, ಮೈ ಕೈ ನೋವು, ಉಸಿರಾಟ ತೊಂದರೆ, ರುಚಿಮತ್ತು ವಾಸನೆ ಕಳೆದುಕೊಳ್ಳುವ ಲಕ್ಷಣಗಳು ಇದ್ದರೆ ಅಂಥವರನ್ನು ಪ್ರತ್ಯೇಕವಾಗಿ ಕೊಠಡಿಯಲ್ಲಿ ಇರಿಸಿ, ಪೋಷಕರನ್ನು ಸಂಪರ್ಕಿಸಿ ಮನೆಗೆ ಕಳುಹಿಸಬೇಕು ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಮಕ್ಕಳು ಕೆಮ್ಮುವಾಗ, ಸೀನುವಾಗ ಕರವಸ್ತ್ರದಿಂದ ಬಾಯಿ, ಮೂಗು ಮುಚ್ಚಿಕೊಳ್ಳಲು ತಿಳಿಸಬೇಕು. ಯಾವುದಾದರೂ ಮಕ್ಕಳ ಕುಟುಂಬದ ಸದಸ್ಯರು ಕೋವಿಡ್ ಲಕ್ಷಣಗಳಾದ ಜ್ವರ, ಕೆಮ್ಮು, ನೆಗಡಿ, ಗಂಟಲು ನೋವು ಅಥವಾ ಉಸಿರಾಟ ತೊಂದರೆಗಳಿಂದ ಬಳಲುತ್ತಿದ್ದರೆ ಅಂಥ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರದಂತೆ ನೋಡಿಕೊಳ್ಳಬೇಕು. ಯಾವುದಾದರೂ ಮಗುವಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟರೆ ಶಾಲೆಯ ಉಳಿದ ಮಕ್ಕಳಿಗೂ ಕೋವಿಡ್ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿ, ದೃಢೀಕರಿಸಿಕೊಳ್ಳಬೇಕು. ಕೋವಿಡ್ ರೋಗ ದೃಢಪಟ್ಟರೆ ಶಾಲೆಯನ್ನು ಮುಚ್ಚಿ, ಸ್ಯಾನಿಟೈಸ್ ಮಾಡಿ, ಸ್ಥಳೀಯ ಆರೋಗ್ಯಾಧಿಕಾರಿಗಳ ಮಾರ್ಗದರ್ಶನ ಪಡೆಯಬೇಕು ಎಂದೂ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.