‘ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಆದಷ್ಟು ಬೇಗ ನಡೆಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಚುನಾವಣೆ ನಡೆಸಲು ತಯಾರಿದ್ದೇವೆ. ಅಗತ್ಯವಾದ ಎಲ್ಲ ಕ್ರಮವನ್ನೂ ನಮ್ಮ ಸರ್ಕಾರದಿಂದ ಕೈಗೊಳ್ಳಲಾಗಿದೆ. ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸುತ್ತೇವೆ. ಕಾನೂನು ಪ್ರಕಾರ ಏನೇನು ಮಾಡಬೇಕೆಂದು ಹೇಳುತ್ತಾರೆಯೋ ಅದೆಲ್ಲವನ್ನೂ ಮಾಡುತ್ತೇವೆ. ಕ್ಷೇತ್ರ ಪುನರ್ ವಿಂಗಡಣೆ ಆಗುತ್ತದೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.