ಬೆಂಗಳೂರು: ಮೈಸೂರು–ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಕೊಡಬೇಕೆಂಬ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಪ್ರಾಯಕ್ಕೆ ಮನ್ನಣೆ ನೀಡಲು ಕಾಂಗ್ರೆಸ್ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಗೊತ್ತಾಗಿದೆ.

ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಕಿರಿಯ ಅಳಿಯ ಡಾ. ಎನ್.ಎಸ್. ಮೋಹನ್ ಅವರಿಗೆ ಚಾಮರಾಜನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮೋಹನ್ ಅವರು ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ. ಟಿಕೆಟ್ ನೀಡುವುದಾದರೆ ‘ಕೈ’ ಹಿಡಿಯಲು ಮೋಹನ್ ಮುಂದಾಗಿದ್ದಾರೆ ಎಂದೂ ಹೇಳಲಾಗಿದೆ.

ಮೈಸೂರು–ಕೊಡಗು ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಶ್ರೀನಿವಾಸ ಪ್ರಸಾದ್ ಅವರ ‘ಪ್ರಭಾವ’ವನ್ನು ಗೆಲುವಿಗೆ ಬಳಸಿಕೊಳ್ಳಲು ಕಾಂಗ್ರೆಸ್ನಲ್ಲಿ ಚರ್ಚೆ ನಡೆದಿದೆ. ಚಾಮರಾಜನಗರದಿಂದ ಮೋಹನ್ ಅವರಿಗೆ ಟಿಕೆಟ್ ನೀಡಿದರೆ ಎರಡೂ ಕ್ಷೇತ್ರಗಳಲ್ಲಿ ಮತ ಸೆಳೆಯಲು ಅವಕಾಶ ಆಗಬಹುದು ಎನ್ನುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.