ಬೆಂಗಳೂರು: ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣಾ ತಯಾರಿಗಾಗಿ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರ ನೇತೃತ್ವದಲ್ಲಿ ನಗರದ ಅರಮನೆ ಮೈದಾನದಲ್ಲಿ ಭಾನುವಾರ ಜೆಡಿಎಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ನಡೆಯಲಿದೆ.

ಅರಮನೆ ಮೈದಾನದ ನಲಪಾಡ್ ಪೆವಿಲಿಯನ್‌ನಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಸಭೆ ಆರಂಭವಾಗಲಿದೆ. ಲೋಕಸಭೆ ಚುನಾವಣೆಯ ಜತೆಯಲ್ಲಿ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣಾ ತಯಾರಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದ್ದಾರೆ.

ಶಾಸಕರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಪರಾಜಿತರಾದ ಪಕ್ಷದ ಅಭ್ಯರ್ಥಿಗಳು ಹಾಗೂ ರಾಜ್ಯ ಘಟಕದಿಂದ ತಾಲ್ಲೂಕು ಘಟಕಗಳವರೆಗಿನ ಪ್ರಮುಖ ಪದಾಧಿಕಾರಿಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.