ಮೈಸೂರು: ‘ಹೊಸ ಮುಖಗಳಿಗೆ ಮಣೆ ಹಾಕುವುದು ಬಿಜೆಪಿಯಲ್ಲಿ ಸಾಮಾನ್ಯ’ ಎಂದು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಹೊಸ ಚಿಗುರು, ಹಳೆ ಬೇರು ಎಂಬುದು ನಡೆಯುತ್ತಲೇ ಇರುತ್ತದೆ. ರಾಜಕೀಯದಲ್ಲಿ ಇದೇ ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ’ ಎಂದರು.

‘ರಾಜಕಾರಣ ತುಂಬಾ ಡೈನಮಿಕ್ ಆಗಿರುತ್ತದೆ. ರಾಜಕೀಯದಲ್ಲಿ ಏನೂ ನಿಶ್ಚಿತವಾಗಿ ಇರುವುದಿಲ್ಲ. ಪಕ್ಷದ ಸಂಸದೀಯ ಮಂಡಳಿಯು ಏನಾದರೂ ನಿರ್ಧಾರ ಕೈಗೊಳ್ಳಬಹುದು. ಅಲ್ಲಿಯವರೆಗೂ ಎಲ್ಲರೂ ಕಾಯಬೇಕಾಗುತ್ತದೆ. ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ತಪ್ಪಲಿದೆ ಎಂಬ ವಿಷಯದ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ’ ಎಂದರು.

ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಆಹ್ವಾನ ನೀಡಿದ್ದೇವೆ. ದೊಡ್ಡವರ ಮಟ್ಟದಲ್ಲಿ ಏನು ನಿರ್ಧರಿಸುತ್ತಾರೆಯೋ ಗೊತ್ತಿಲ್ಲ. ರಾಜಕೀಯದಲ್ಲಿ ಯಾರಿಗೂ ಬಾಗಿಲು ಮುಚ್ಚುವುದಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.