ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಬಿಜೆಪಿ ತನ್ನ ಏಳನೇ ಪಟ್ಟಿ ಪ್ರಕಟಿಸಿದೆ.

ಚಿತ್ರದುರ್ಗ (ಮೀಸಲು) ಹಾಗೂ ಮಹಾರಾಷ್ಟ್ರದ ಅಮರಾವತಿ (ಮೀಸಲು) ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇಂದು ಸಂಜೆ ಘೋಷಿಸಿದೆ. ಎರಡು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಚಿತ್ರದುರ್ಗದಿಂದ ಬಿಜೆಪಿ ಹಿರಿಯ ನಾಯಕ, ಮುಧೋಳ ಶಾಸಕರಾಗಿದ್ದ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ. ಹಾಲಿ ಸಂಸದ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ತಪ್ಪಿದೆ.

ಕಳೆದ ಬಾರಿ 2019ರಲ್ಲಿ ಕಾಂಗ್ರೆಸ್ ಬೆಂಬಲದಿಂದ ಪಕ್ಷೇತರ ಅಭ್ಯರ್ಥಿಯಾಗಿ ಅಮರಾವತಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡಿದ್ದ ನವನೀತ್ ರಾಣಾ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ನವನೀತ್ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದರು. ಅವರು ನಟಿಯೂ ಹೌದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.