ಕಲಬುರಗಿ: ಕಾಂಗ್ರೆಸ್ ಸೇರ್ಪಡೆಯಾಗಲು ಮೂವರು ಬಿಜೆಪಿ ಸಂಸದರು ಬಯಸಿದ್ದು, ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ನಗರಕ್ಕೆ ಬಂದಿರುವ ಶಿವಕುಮಾರ್ ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸದ್ಯಕ್ಕೆ ಅವರ ಹೆಸರನ್ನು ಬಹಿರಂಗಪಡಿಸಲಾಗದು. ಇನ್ನೂ ಹಲವು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದರು.

ಬಿಜೆಪಿಯ ಡಿ.ವಿ.ಸದಾನಂದಗೌಡ ಅವರು ಬೆಂಗಳೂರಿನ ಕ್ಷೇತ್ರವೊಂದರಿಂದ ಕಾಂಗ್ರೆಸ್ ಟಿಕೆಟ್ ಮೂಲಕ ಸ್ಪರ್ಧಿಸುವ ಸಾಧ್ಯತೆಗಳ ಕುರಿತು ಶಿವಕುಮಾರ್ ಯಾವುದೇ ಹೇಳಿಕೆ ನೀಡಲಿಲ್ಲ.

ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ, ಅವರ ಮನೆಯವರು, ಅವರ ಮಗನ ಸ್ಪರ್ಧೆಯನ್ನೂ ನೋಡಿದ್ದೇವೆ. ಡಿ.ಕೆ. ಸುರೇಶ್ ಬರೀ ಸಂಸದ ಅಲ್ಲ. ಪಂಚಾಯಿತಿ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. ಅವರಿಗೆ ಚುನಾವಣೆ ಎದುರಿಸುವುದು ಗೊತ್ತಿದೆ' ಎಂದು ಹೇಳಿದರು.

'ಸಿ.ಎನ್. ಮಂಜುನಾಥ್ ಅವರನ್ನು ನಮ್ಮ ಸರ್ಕಾರವೂ ಜಯದೇವದಲ್ಲಿ ನಿರ್ದೇಶಕರನ್ನಾಗಿ ಮುಂದುವರೆಸಿತ್ತು. ಅವರು ಸ್ಪರ್ಧಿಸಿದರೆ ಸ್ವಾಗತ' ಎಂದರು.

'ನಮ್ಮ ಗ್ಯಾರಂಟಿಗಳನ್ನು ಬಿಜೆಪಿಯವರು ನಕಲು ಮಾಡಿ ಮೋದಿ ಗ್ಯಾರಂಟಿಯಾಗಿ ಕರೆದುಕೊಳ್ಳುತ್ತಿದ್ದಾರೆ' ಎಂದು ವ್ಯಂಗ್ಯವಾಡಿದರು.

'ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನೀರಿನ ಅಭಾವವಾಗಲಿದ್ದು, ಸಮಸ್ಯೆ ನೀಗಿಸಲು ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣ ತೆಗೆದಿರಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವರು, ನಗರಾಭಿವೃದ್ಧಿ ಸಚಿವರು ಈಗಾಗಲೇ ಅಧಿಕಾರಿಗಳ ಸಭೆ ನಡೆಸಿದ್ದಾರೆ' ಎಂದರು.

ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ, ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.