‘ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿಕುನ್ಹಾ ಅವರು ಕೋವಿಡ್ ತನಿಖಾ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸುವಾಗ ನಾನು ಇರಲಿಲ್ಲ. ಅದನ್ನು ಪರಿಶೀಲಿಸಿ, ಏನು ಶಿಫಾರಸು ಮಾಡಿದ್ದಾರೆ ಎಂಬುದನ್ನು ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು. ‘ಯಾವುದಾದರು ವಿಷಯದ ಕುರಿತು ಸತ್ಯಾಸತ್ಯತೆ ಸರ್ಕಾರಕ್ಕೆ ತಿಳಿಸಬೇಕು ಎಂಬ ಉದ್ದೇಶ ಇಟ್ಟುಕೊಂಡು ಆಯೋಗಗಳನ್ನು ರಚಿಸಲಾಗಿರುತ್ತದೆ. ಆಯೋಗ ವರದಿ ಬಂದಾದ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಇಲ್ಲವಾದರೆ ಆಯೋಗ ಏಕೆ ರಚಿಸಬೇಕು? ಡಿ ಕುನ್ಹಾ ವರದಿ ಸಚಿವ ಸಂಪುಟದ ಮುಂದೆ ಬಂದರೆ ಚರ್ಚಿಸಲಾಗುವುದು’ ಎಂದೂ ಹೇಳಿದರು.