ಬೆಂಗಳೂರು: ಮಹದಾಯಿ ನೀರನ್ನು ಆಶ್ರಯಿಸಿದ ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿದೆ.

ಇದೇ 17ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದ ಲಾವಣೆ ಸಚಿವಾಲಯವು, ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ‘ಪರಿಸರ ಪರಿಣಾಮ ಅಧ್ಯಯನ ಅಧಿ ಸೂಚನೆ–2006’ರ ವ್ಯಾಪ್ತಿಯಲ್ಲಿ ಬರುವುದಿಲ್ಲ. ಹೀಗಾಗಿ ಯೋಜನೆ ಅನುಷ್ಠಾನಕ್ಕೆ ತಕರಾರು ಇಲ್ಲ ಎಂದು ಹೇಳಿದೆ. ಮಹದಾಯಿಗಾಗಿರಾಜ್ಯದ ಜನರು ನಿರಂತರವಾಗಿ ನಡೆಸಿದ ಚಳವಳಿಗೆ ದೊರೆತ ಮೊದಲ ಜಯ ಇದಾಗಿದೆ.

‘ಜಲವಿದ್ಯುತ್ ಅಥವಾ ನೀರಾವರಿ ಯೋಜನೆ ಹಾಗೂ ಹೊಸ ಅಚ್ಚುಕಟ್ಟು ಪ್ರದೇಶಗಳಿಗೆ ನೀರನ್ನು ಹಾಯಿಸುವ ಉದ್ದೇಶವನ್ನು ಈ ಯೋಜನೆ ಒಳ ಗೊಂಡಿಲ್ಲ. ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಕಾಮ ಗಾರಿ ಆರಂಭಿಸಲು ಆಕ್ಷೇಪ ಇಲ್ಲ. ಕರ್ನಾಟಕ ಸರ್ಕಾರವು ಈ ಯೋಜನೆ ಅನುಷ್ಠಾನಕ್ಕೆ ಬೇಕಾದ ತಯಾರಿ ಮಾಡಿ ಕೊಳ್ಳಲು ಅಭ್ಯಂತರ ಇಲ್ಲ’ ಎಂದು ಪತ್ರ ವಿವರಿಸಿದೆ.

ಮೂರು ರಾಜ್ಯಗಳು (ಗೋವಾ–ಮಹಾರಾಷ್ಟ್ರ–ಕರ್ನಾಟಕ) ಮಾತುಕತೆ ಮೂಲಕ ಈ ವಿವಾದವನ್ನು ಇತ್ಯರ್ಥಪಡಿಸಿಕೊಂಡು ಯೋಜನೆ ಅನುಷ್ಠಾನ ಮಾಡಬಹುದು ಎಂದುಮಹದಾಯಿ ನ್ಯಾಯ ಮಂಡಳಿಯು 2018ರ ಆಗಸ್ಟ್ 14ರಂದು ನೀಡಿದ ತೀರ್ಪಿನಲ್ಲಿ ಹೇಳಿತ್ತು. ಇದರ ಅನುಸಾರ ಕರ್ನಾಟಕ ಸರ್ಕಾರವು ಸಂಬಂಧ ಪಟ್ಟ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದ ಯೋಜನೆ ಜಾರಿಗೊಳಿಸಬಹುದು ಎಂದು ಪತ್ರ ಉಲ್ಲೇಖಿಸಿದೆ.

ಯೋಜನೆ ಏನು?: ಧಾರವಾಡ, ಗದಗ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಿಗೆನೀರುಣಿಸುವ ಯೋಜನೆಗೆ 1988ರಲ್ಲಿ ಅನುಮೋದನೆ ನೀಡಲಾಗಿತ್ತು.

2006ರಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿ ಸರ್ಕಾರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿತ್ತು. ನಂತರ ಗೋವಾ ಇದಕ್ಕೆ ತಕರಾರು ತೆಗೆದಿತ್ತು. 2012ರಲ್ಲಿ ಬಸವರಾಜ ಬೊಮ್ಮಾಯಿ ಜಲಸಂಪನ್ಮೂಲ ಸಚಿವರಾಗಿದ್ದ ಅವಧಿಯಲ್ಲಿ ಪರಿಷ್ಕೃತ ಯೋಜನಾ ಮೊತ್ತಕ್ಕೆ ಒಪ್ಪಿಗೆ ನೀಡಲಾಗಿತ್ತು.

ಯೋಜನೆಗಿರುವ ಅಡೆತಡೆ

* ಯೋಜನೆಗೆ ಅಡ್ಡಿಪಡಿಸುತ್ತಿರುವ ಗೋವಾ ತಕರಾರು ಮಾತುಕತೆ ಮೂಲಕ ನಿವಾರಣೆಯಾಗಬೇಕು

* ನ್ಯಾಯಮಂಡಳಿಯ ತೀರ್ಪನ್ನು ಆಧರಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು

* ಭೀಮಗಡ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಯೋಜನೆ ನಡೆಯಬೇಕಿರುವುದರಿಂದ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಮ್ಮತಿ ಸೂಚಿಸಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.