ಹುಬ್ಬಳ್ಳಿ: ‘ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸುಮಲತಾ ಅವರಿಗೆ ನೀಡುವಂತೆ ಈವರೆಗೆ ವಾದಿಸುತ್ತಿದ್ದ ಬಿಜೆಪಿಯ ಕೆ.ಸಿ. ನಾರಾಯಣಗೌಡರು ಈಗ ಕಾಂಗ್ರೆಸ್ ಹೊಸ್ತಿಲಲ್ಲಿ ಇದ್ದಾರೆ. ಇದರ ಅರ್ಥ ಮುಂದೆ ಸುಮಲತಾ ಕೂಡ ಕಾಂಗ್ರೆಸ್‌ಗೆ ಹೋಗಬಹುದು’ ಎಂದು ಶಾಸಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.

‘ಬಿಜೆಪಿ– ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಒಂದು ವೇಳೆ ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕಿಳಿದರೆ ಸ್ವಾಗತಿಸುತ್ತೇವೆ. ನಾವು ಸುಮಲತಾ ವಿರುದ್ಧ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

'28 ಲೋಕಸಭಾ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಕೇಳಿದ್ದೇವೆ. ಎಚ್.ಡಿ. ದೇವೇಗೌಡರ ಕುಟುಂಬದಿಂದ ಇಬ್ಬರು ಕಣಕ್ಕಿಳಿಯಬಹುದು. ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವರೇ ಅಥವಾ ಇಲ್ಲವೇ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.