ಶಿವಮೊಗ್ಗ/ಕಡೂರು: ರಾಜ್ಯದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಡೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಮತಿಘಟ್ಟ ಬಳಿ ಟೆಂಪೊ ಟ್ರಾವೆಲರ್ ಮತ್ತು ಕಾರಿನ ನಡುವೆ ಸಂಭವಿಸಿದ ಅಫಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಬೆಂಗಳೂರು ರಾಜಾಜಿನಗರದ ಗಿರಿಧರ (53), ಮಯಾಂಕ್ (3) ಸ್ಥಳದಲ್ಲಿ ಮೃತಪಟ್ಟವರು. ತೀವ್ರ ಗಾಯಗೊಂಡಿದ್ದ ಗಿರಿಧರ ಅವರ ಸಂಬಂಧಿ ಶೋಭಾ (50) ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.

ಗಿರಿಧರ ಅವರು ಮದುವೆ ಕಾರ್ಯಕ್ರಮಕ್ಕೆಂದು ಹೊನ್ನಾವರಕ್ಕೆ ತೆರಳುತ್ತಿದ್ದರು. ಈ ಸಮಯ ಮತಿಘಟ್ಟದ ಕುರುಬರಹಳ್ಳಿ ಗೇಟ್ ಬಳಿ ಟೆಂಪೊ ಟ್ರಾವೆಲರ್‌ಗೆ ಮುಖಾಮುಖಿ ಡಿಕ್ಕಿಯಾಗಿ ಅಫಘಾತ ಸಂಭವಿಸಿದೆ. ಟಿ.ಟಿ. ಗಾಡಿಯಲ್ಲಿದ್ದ ಕೇರಳ ಮೂಲದ ಏಳು ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ತಾಲ್ಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಗುರುವಾರ ಸಂಜೆ ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರು ಸಾವಿಗೀಡಾಗಿದ್ದಾರೆ.

ಅಪಘಾತದಲ್ಲಿ 37 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಕಾರಿಪುರದಿಂದ ಶಿವಮೊಗ್ಗದತ್ತ ಹೊರಟಿದ್ದ ‘ವೆಂಕಟಮಹಾಲಕ್ಷ್ಮಿ (ಕಾಳಪ್ಪ)’ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ‘ಶ್ರೀನಿವಾಸ’ ಬಸ್‌ಗಳ ನಡುವೆ ಈ ಅಪಘಾತ ಸಂಭವಿಸಿದೆ.

ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಧಾವಂತದಲ್ಲಿ ಮುಂದಿನ ಬಸ್ ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವೆಂಕಟ ಮಹಾಲಕ್ಷ್ಮೀ ಬಸ್‌ನ ಚಾಲಕ ಶಿಕಾರಿಪುರ ತಾಲ್ಲೂಕಿನ ಈಸೂರಿನ ನಿವಾಸಿ ಅರುಣ್ ಕುಮಾರ್ (44) ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ಪ್ರಯಾಣಿಕ ತಿಪ್ಪೇಸ್ವಾಮಿ (40) ಮೃತಪಟ್ಟಿದ್ದಾರೆ.

ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ಅವಘಡ ಸಂಭವಿಸಿದೆ. ಅಪಘಾತ ತೀವ್ರತೆಗೆ ಎರಡೂ ಬಸ್‌ಗಳು ಒಂದರೊಳಗೊಂದು ಸಿಲುಕಿಕೊಂಡಿದ್ದವು. ಜೆಸಿಬಿ ಬಳಸಿ ಹೊರಕ್ಕೆ ಎಳೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.