ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆ ಮತದಾನ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಾರಿ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಸೋಲುವುದು ನಿಶ್ಚಿತ ಎನ್ನುವುದನ್ನು ಅರಿತು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರು ಮತ ಎಣಿಕೆ ಕೇಂದ್ರದಿಂದ ಹೊರ ನಡೆದರು.

Live: ಉಪ ಚುನಾವಣೆ ಫಲಿತಾಂಶ: ಮಸ್ಕಿಯಲ್ಲಿ ಕಾಂಗ್ರೆಸ್, ಬಸವ ಕಲ್ಯಾಣದಲ್ಲಿ ಬಿಜೆಪಿ ಮುನ್ನಡೆ

'ಕ್ಷೇತ್ರದಲ್ಲಿ ವಿರೋಧಿ ಅಲೆ ಎದ್ದಿರುವುದು ಗೊತ್ತಾಗುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಮಾಡಿದಾಗ್ಯೂ ಜನರು ಬೆಲೆ ಕೊಟ್ಟಿಲ್ಲ. ನಿರೀಕ್ಷಿತ ಮತಗಟ್ಟೆಯಲ್ಲೂ ಬಿಜೆಪಿಗೆ ಮತಗಳು ಬಂದಿಲ್ಲ' ಎಂದು ಪ್ರತಾಪಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸೋಲಿಗೆ ಏನು ಕಾರಣ ಎಂಬುದು ಆನಂತರ ಪಕ್ಷದ ಹಿರಿಯರು ಕುರಿತು ಚರ್ಚಿಸಲಿದ್ದಾರೆ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.