ಬೆಂಗಳೂರು: ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಹ್ಯಾಕ್ ಮಾಡಬಹುದು. ಹೀಗಾಗಿ, ಜಗತ್ತು ಮತ್ತೆ ಮತಪತ್ರಗಳ ವ್ಯವಸ್ಥೆಗೆ ಮೊರೆ ಹೋಗಬೇಕು ಎಂಬ ಟೆಸ್ಲಾ ಕಂಪನಿ ಮಾಲೀಕ ಇಲಾನ್ ಮಸ್ಕ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಮಸುಕಾಗಿದ್ದ ಅನುಮಾನ ಈಗ ತೀಕ್ಷ್ಣ!. ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಇಲಾನ್ ಮಸ್ಕ್ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ.’ ಎಂದು ಬರೆದುಕೊಂಡಿದ್ದಾರೆ.
.EVM: ವಿವಾದ ಸೃಷ್ಟಿಸಿದ ಎಲಾನ್ ಮಸ್ಕ್ ಹೇಳಿಕೆ.EVM ‘ಬ್ಲ್ಯಾಕ್ ಬಾಕ್ಸ್’ನಂತೆ; ಪರಿಶೀಲನೆಗೆ ಅವಕಾಶವೇ ಇಲ್ಲ: ರಾಹುಲ್ ಟೀಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.