ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್ 12ರಂದು ‘ಸಪ್ತಪದಿ’ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗಿದ್ದು, ಅಂದು ವಿವಾಹವಾಗಲು ಬಯಸುವವರು ದೇವಳದ ಕಚೇರಿಯಿಂದ ಅರ್ಜಿ ಪ್ರತಿ ಪಡೆದು, ಫೆ.15ರೊಳಗೆ ಭರ್ತಿ ಮಾಡಿ ಸಲ್ಲಿಸುವಂತೆ ದೇವಳದ ಪ್ರಕಟಣೆ ತಿಳಿಸಿದೆ.

ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕ ದೃಢೀಕರಿಸುವ ದಾಖಲೆ, ಪಾಸ್‌ಪೋರ್ಟ್ ಅಳತೆಯ 2 ಫೋಟೊ, ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಪ್ರತಿ, ವಧು-ವರರ ಬ್ಯಾಂಕ್ ಖಾತೆಯ ವಿವರ ಮತ್ತು ಅವಿವಾಹಿತರು ಎಂಬುದಾಗಿ ಗ್ರಾಮ ಪಂಚಾಯಿತಿಯಿಂದ ಅಥವಾ ಸಂಬಂಧಪಟ್ಟ ಸರ್ಕಾರಿ ಅಧಿಕಾರಿಯಿಂದ ದೃಢೀಕರಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಫೆ.20ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು. ಫೆ.28 ಆಕ್ಷೇಪಣೆ ಸಲ್ಲಿಸಲು ಕೊನೆ ದಿನಾಂಕವಾದರೆ, ಮಾರ್ಚ್ 3ರಂದು ವಧು–ವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮಾರ್ಚ್ 12ರಂದು ಬೆಳಿಗ್ಗೆ 11.30ರಿಂದ 12.00ರ ವೃಷಭ ಲಗ್ನ ಮುಹೂರ್ತದಲ್ಲಿ ವಿವಾಹ ನೆರವೇರಲಿವೆ.

ಮಾಹಿತಿಗೆ 08257-281224, 236200, 281700, 281265 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.