ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ಬಿಬಿಎಂಪಿ ಯಲಹಂಕ ವಲಯದ ಮುಖ್ಯ ಎಂಜಿನಿಯರ್ ರಂಗನಾಥ್ ಎಸ್.ಪಿ., ಅಬಕಾರಿ ಇಲಾಖೆ ಉಡುಪಿ ಉಪ ಆಯುಕ್ತೆ ರೂಪಾ, ಕೊಡಗು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಜಯಣ್ಣ ಬಿ.ವಿ. ಸೇರಿದಂತೆ 13 ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ರಾಜ್ಯದಾದ್ಯಂತ 60 ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಉತ್ತರ ಕನ್ನಡದ ಕಿರಿಯ ಎಂಜಿನಿಯರ್ ಪ್ರಕಾಶ್, ಮೈಸೂರಿನ ಸಹಾಯಕ ಎಂಜಿನಿಯರ್ ಫಯಾಝ್ ಅಹಮದ್, ಬಿಡದಿ ತಾಲ್ಲೂಕಿನ ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯತೀಶ್, ಧಾರವಾಡದ ವಲಯ ಅರಣ್ಯ ಅಧಿಕಾರಿ ಮಹೇಶ್ ಚಂದ್ರಯ್ಯ ಹಿರೇಮಠ, ಬೀದರ್ನ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಕುಮಾರ ಸ್ವಾಮಿ, ಕೋಲಾರದ ಸಹಾಯಕ ನಿರ್ದೇಶಕ ನಾಗರಾಜಪ್ಪ, ವಿಜಯಪುರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ, ಚಿಕ್ಕಬಳ್ಳಾಪುರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸದಾಶಿವಯ್ಯ, ಮಳವಳ್ಳಿ ತಾಲ್ಲೂಕಿನ ಅಗಸನಪುರ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ ಕೃಷ್ಣೇಗೌಡ, ಬೆಳಗಾವಿ ಜಿಲ್ಲೆಯ ನಿಡಗುಂದಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸದಾಶಿವ ಜಯಪ್ಪ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

13 ಎಸ್ಪಿಗಳು, 12 ಡಿವೈಎಸ್ಪಿಗಳು, 25 ಪೊಲೀಸ್ ಇನ್ಸ್ಪೆಕ್ಟರ್ಗಳು ಸೇರಿದಂತೆ 130 ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಬೀದರ್: ಕಾರಂಜಾ ಯೋಜನಾ ಇಇ ಕಚೇರಿ, ಮನೆ ಮೇಲೆ ದಾಳಿ

ಬೀದರ್: ಕಾರಂಜಾ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಕುಮಾರ ಸ್ವಾಮಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.

ಭಾಲ್ಕಿ ಪಟ್ಟಣದ ಕಾರಂಜಾ ಕಚೇರಿ, ಬೀದರ್ ನಗರದ ಕೃಷಿ ಕಾಲೊನಿ, ಬೀದರ್ ತಾಲ್ಲೂಕಿನ ನಾಗೂರ್ ಗ್ರಾಮದ ಮನೆ, ಕಲಬುರಗಿ ನಗರದ ಮನೆ ಮೇಲೆ ಏಕಕಾಲಕ್ಕೆದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ನೀಲಪ್ಪ ಓಲೇಕಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಚಿಕ್ಕಬಳ್ಳಾಪುರ: ಕೆಆರ್ಐಡಿಎಲ್ ಎಂಜಿನಿಯರ್ ಮನೆ ಮೇಲೆ ದಾಳಿ

ಚಿಕ್ಕಬಳ್ಳಾಪುರ: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆ.ಆರ್.ಐ.ಡಿ.ಎಲ್) ಎಂಜಿನಿಯರ್ ಸದಾಶಿವಯ್ಯ ಅವರ ಕಚೇರಿ ಮತ್ತು ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ಕಚೇರಿ, ಯಲಹಂಕ ಬಾಡಿಗೆ ಮನೆ, ಮೈಸೂರಿನ ರಾಮಕೃಷ್ಣ ನಗರದ ಮನೆ, ಬಗಾದಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮನೆ, ಟಿ.ನರಸೀಪುರದ ಒಕ್ಕಲಿಗೆರೆಯಲ್ಲಿರುವ ಮನೆಯ ಮೇಲೆ ದಾಳಿ ನಡೆದಿದೆ.

ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ರಾಮ್ ಅರಸಿದ್ದಿ ಮತ್ತು ಡಿವೈಎಸ್ಪಿ ವಿರೇಂದ್ರ ಕುಮಾರ್, ಮೋಹನ್, ಶಿವಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಕೊಡಗು: ಇಬ್ಬರು ಅಧಿಕಾರಿಗಳ ಮನೆ ಮೇಲೆ ದಾಳಿ

ಮಡಿಕೇರಿ: ಲೋಕಾಯುಕ್ತ ಪೊಲೀಸರು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಜಯಣ್ಣ ಹಾಗೂ ಸಹಾಯಕ ಎಂಜಿನಿಯರ್ ಫಯಾಜ್ ಅಹಮ್ಮದ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಜಯಣ್ಣ ಅವರು ಈಗಷ್ಟೇ ಕಡಬ ತಾಲ್ಲೂಕಿಗೆ ವರ್ಗಾವಣೆಯಾಗಿದ್ದರು. ಕಡಬದಲ್ಲಿನ ಅವರ ಕಚೇರಿ, ಕುಶಾಲನಗರದಲ್ಲಿನ ಮನೆ ಮೇಲೆ ದಾಳಿ ನಡೆಸಲಾಗಿದೆ.

ಫಯಾಜ್ ಅಹಮ್ಮದ್ ಅವರ ಕುಶಾಲನಗರದಲ್ಲಿನ ಮನೆ, ಪಿರಿಯಾಪಟ್ಟಣದ ತೋಟದ ಮನೆ ಹಾಗೂ ಮಡಿಕೇರಿಯಲ್ಲಿನ ಅವರ ಸಂಬಂಧಿಕರ ಮನೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾರವಾರ: ಕೆಡಿಎ ಜೆಇಇ ಮನೆ ಮೇಲೆ ದಾಳಿ

ಕಾರವಾರ: ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ (ಕೆಡಿಎ) ಜ್ಯೂನಿಯರ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರಕಾಶ ರೇವಣಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿದೆ.

ಇಲ್ಲಿನ ಕಾಜುಬಾಗದಲ್ಲಿರುವ ಕೆಡಿಎ ಕಚೇರಿ, ಲಿಂಗನಾಯ್ಕವಾಡಾದಲ್ಲಿರುವ ಪ್ರಕಾಶ್ ಅವರ ಮನೆ, ಹಬ್ಬುವಾಡಾದಲ್ಲಿರುವ ಫ್ಲ್ಯಾಟ್, ಅಂಕೋಲಾ ತಾಲ್ಲೂಕಿನ ಅವರ್ಸಾ ಗ್ರಾಮದಲ್ಲಿರುವ ಮೂಲಮನೆ ಮೇಲೆ ಪ್ರತ್ಯೇಕ ತಂಡಗಳು ದಾಳಿ ನಡೆಸಿ, ದಾಖಲೆ ಪರಿಶೀಲನೆಯಲ್ಲಿ ತೊಡಗಿವೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಕಾರವಾರ, ಚಿಕ್ಕಮಗಳೂರು, ಧಾರವಾಡದಿಂದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆ ಕಾರ್ಯದಲ್ಲಿ ತೊಡಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ರಾಮನಗರ: ಇಬ್ಬರು ಪಿಡಿಒ ಮನೆ ಮೇಲೆ ದಾಳಿ

ರಾಮನಗರ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ತಾಲ್ಲೂಕಿನ ಬಿಡದಿ ಹೋಬಳಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಯತೀಶ್ ಚಂದ್ರ ಹಾಗೂ ಚನ್ನಪಟ್ಟಣ ಮೈಲನಾಯಕನಹಳ್ಳಿ ಪಿಡಿಒ ಶಿಬಾ ನಿಖಾತ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಚನ್ನಪಟ್ಟಣ ಮತ್ತು ಮೈಸೂರಿನಲ್ಲಿ ಮನೆ ಹೊಂದಿರುವ ಯತೀಶ್ ₹ 20 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ. ಸದ್ಯ ಪತ್ನಿ ಹೆಸರಿನಲ್ಲಿ ಮೈಸೂರಿನಲ್ಲಿ ಮನೆ ನಿರ್ಮಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈಗಲ್ಟನ್ ರೆಸಾರ್ಟ್ನಲ್ಲಿ ಬಾಡಿಗೆ ಮನೆಯಲ್ಲಿದ್ದ ಯತೀಶ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಾಳಿಗೊಳಗಾಗಿರುವ ಯತೀಶ್ ಮತ್ತು ಶಿಬಾ ಇಬ್ಬರೂ ಒಂದೇ ಬ್ಯಾಚ್ನ ಪಿಡಿಒಗಳಾಗಿದ್ದಾರೆ. ಶಿಬಾ ಅವರೂ ಅಕ್ರಮವಾಗಿ ಆಸ್ತಿ ಸಂಪಾದಿಸಿರುವ ಆರೋಪವಿದ್ದು, ಒಂದು ತಿಂಗಳಿಂದ ಕರ್ತವ್ಯಕ್ಕೆ ಗೈರಾಗಿದ್ದರು ಎಂಬ ಆರೋಪ ಕೇಳಿಬಂದಿದೆ.

ಮಂಚನಾಯಕನಹಳ್ಳಿ ರಾಜ್ಯದಲ್ಲೇ ಅತಿ ಹೆಚ್ಚು ತೆರಿಗೆ ವಸೂಲಿಯಾಗುವ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎರಡು ವರ್ಷದಿಂದ ಇಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಹಾಗಾಗಿ, ಅಲ್ಲಿ ಪಿಡಿಒ ಆಗಿರುವ ಯತೀಶ್ ಅವರ ಮನೆ ಹಾಗೂ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ವಿಜಯಪುರ: ಆರ್ಟಿಓ ಅಧಿಕಾರಿ ನಿವಾಸದ ಮೇಲೆ ದಾಳಿ

ವಿಜಯಪುರ: ಇಲ್ಲಿನ ಚಾಲುಕ್ಯ ನಗರದಲ್ಲಿರುವ ಬಾಗಲಕೋಟೆ ಜಿಲ್ಲೆ ಜಮಖಂಡಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪರಿಶೀಲನೆ ನಡೆದಿದೆ.

ಷಣ್ಮುಖಪ್ಪ ನಿವಾಸ ಸೇರಿದಂತೆ ವಿಜಯಪುರ ನಗರದಲ್ಲಿರುವ ಅವರ ಸಂಬಂಧಿಕರ ನಿವಾಸಗಳ ಮೇಲೂ ದಾಳಿ ನಡೆದಿದೆ.

ಲೋಕಯುಕ್ತ ಡಿಎಸ್ಪಿ ಸುರೇಶ ರೆಡ್ಡಿ, ಇನ್ಸ್ಪೆಕ್ಟರ್ ಆನಂದ ಠಕ್ಕನ್ನವರ ಹಾಗೂ ಇತರ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದಾರೆ.

ಆರ್ಎಫ್ಒ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಧಾರವಾಡ: ವಲಯ ಅರಣ್ಯಾಧಿಕಾರಿ (ಆರ್ಎಫ್ಒ) ಮಹೇಶ ಹಿರೇಮಠ ಅವರ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೂಕಾಂಬಿಕಾ ನಗರದಲ್ಲಿನ ನಿವಾಸದಲ್ಲಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ದಾಖಲೆ, ಬೆಲೆಬಾಳುವ ವಸ್ತುಗಳ ಪರಿಶೀಲನೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.