ಬೆಂಗಳೂರು: ‘ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಆಗ್ರಹಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಇಂತಹ ದುಷ್ಕೃತ್ಯ ಎಸಗಿದವರಿಗೆ ತಕ್ಷಣವೇ ಕಠಿಣ ಶಿಕ್ಷೆ ಆಗಬೇಕು. ಈ ಹೇಯ ಪ್ರಕರಣದ ವಿಚಾರಣೆಯಲ್ಲಿ ವಿಳಂಬಕ್ಕೆ ಆಸ್ಪದವಾಗಬಾರದು. ಹೀಗಾಗಿ, ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು’ ಎಂದರು.

‘ಇಂತಹ ಘೋರ ದುಷ್ಕೃತ್ಯ ಎಸಗಿದವರಿಗೆ ಗಲ್ಲು ಶಿಕ್ಷೆಯಂಥ ಕಠಿಣಾತಿ ಕಠಿಣ ಶಿಕ್ಷೆಯಾದರೆ ಮಾತ್ರ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಗಟ್ಟಲು ಸಾಧ್ಯ’ ಎಂದರು.

‘ಈ ಕೃತ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಸರ್ಕಾರ ಗಮನಕೊಡಲಿದೆ’ ಎಂದ ಸಚಿವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂತಹ ಘೋರಕೃತ್ಯ ಎಸಗಿದವರನ್ನು ವಿಳಂಬವಿಲ್ಲದೆ ಗಲ್ಲು ಶಿಕ್ಷೆಗೆ ಒಳಪಡಿಸಲು ಸಾಧ್ಯವಾಗುವಂತಹ ಕಾನೂನು ರೂಪಿಸುವ ಬಗ್ಗೆ ಸಮಾಲೋಚನೆ ನಡೆಸಬೇಕು’ ಎಂದು ಅಭಿಪ್ರಾಯಪಟ್ಟರು.

‘ಚಿಕ್ಕವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲೂ ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕು’ ಎಂದೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.