ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಚಟುವಟಿಕೆಗಳ ಮೇಲೆ ನಿರ್ಬಂಧ ವಿಧಿಸಿ ಹೊರಡಿಸಿದ್ದ ಸುತ್ತೋಲೆಯನ್ನು ವಿಧಾನಸಭೆ ಸಚಿವಾಲಯ ಹಿಂದಕ್ಕೆ ಪಡೆದಿದೆ.

ವಿಧಾನಸೌಧದ ಕಾರಿಡಾರ್ಗಳಲ್ಲಿ ಪತ್ರಿಕಾ ಛಾಯಾಗ್ರಾಹಕರು ಛಾಯಾಗ್ರಹಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ವಿಡಿಯೊ ಚಿತ್ರೀಕರಣ ನಡೆಸುವುದನ್ನು ನಿರ್ಬಂಧಿಸಿ ಸುತ್ತೋಲೆ ಹೊರಡಿಸಲಾಗಿತ್ತು. ಕಾರಿಡಾರ್ಗಳಲ್ಲಿ ವಿಡಿಯೊ ಚಿತ್ರೀಕರಣ ಮತ್ತು ಪತ್ರಿಕಾ ಛಾಯಾಗ್ರಹಣ ಮಾಡುತ್ತಿದ್ದು, ಇದರಿಂದ ಹಲವಾರು ಬಾರಿ ಗಣ್ಯ ವ್ಯಕ್ತಿಗಳ ಸುಗಮ ಚಲನವಲನಕ್ಕೆ ಅಡ್ಡಿ ಉಂಟಾಗುತ್ತಿದೆ ಎಂದು ಸುತ್ತೋಲೆಯಲ್ಲಿ ಸಮರ್ಥನೆ ನೀಡಲಾಗಿತ್ತು.

ಸುಗಮ ಚಲನೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಮುಖ್ಯಮಂತ್ರಿಯವರು ಮತ್ತು ಇತರ ಸಚಿವರಿಂದ ಹೇಳಿಕೆ ಪಡೆಯಲು ವಿಧಾನಸೌಧದ ಕೆಂಗಲ್ ದ್ವಾರದ ಬಳಿ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಸಚಿವಾಲಯದ ಈ ಕ್ರಮಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.