ಚಿತ್ರದುರ್ಗ: ವೈದ್ಯಕೀಯ ಶಿಕ್ಷಣದ ದ್ವಿತೀಯ ವರ್ಷದ ಮೈಕ್ರೋ ಬಯಾಲಾಜಿ-1 ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂಬ ವದಂತಿ ಹರಿದಾಡುತ್ತಿದೆ.

ರಾಜ್ಯದಾದ್ಯಂತ ದ್ವಿತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆ ಬೆಳಿಗ್ಗೆ 9ಕ್ಕೆ ಆರಂಭವಾಗಿತ್ತು. ಪರೀಕ್ಷೆ ಶುರುವಾಗಿ 10 ನಿಮಿಷದ ಬಳಿಕ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪ್ರಶ್ನೆಪತ್ರಿಕೆ ನೈಜವಾದದ್ದು ಎಂದು ಬಸವೇಶ್ವರ ವೈದ್ಯಕೀಯ ಕಾಲೇಜು ಪರೀಕ್ಷಾಂಗ ವಿಭಾಗದ ಮುಖ್ಯಸ್ಥ ಡಾ.ಪ್ರಶಾಂತ್ ಖಚಿತಪಡಿಸಿದ್ದಾರೆ.

'ನಮ್ಮ ಕಾಲೇಜಿನಲ್ಲಿ ಪತ್ರಿಕೆ ಲೀಕ್ ಆಗಿಲ್ಲ. ಎಲ್ಲಿ ಆಗಿದೆ ಎಂಬುದು ಗೊತ್ತಿಲ್ಲ. ಈ ಸಂಬಂಧ ತನಿಖೆ ಎದುರಿಸಲು ಸಿದ್ಧ' ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.