ನವದೆಹಲಿ: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಎದುರಾಗಿರುವ ತೊಡಕು ಬಗೆಹರಿಸಲು ತಮಿಳುನಾಡು ಸರ್ಕಾರದೊಂದಿಗೆ ಮಾತುಕತೆಗೆ ನಮ್ಮ ಸರ್ಕಾರ ಸಿದ್ಧವಿದೆ. ಈ ವಿಷಯವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಸಂಧಾನ ಮಾತುಕತೆಯ ಮಧ್ಯಸ್ಥಿಕೆ ವಹಿಸಲು ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಇಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಈ ವಿಷಯದ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ಕರ್ನಾಟಕ ಸರ್ಕಾರ ಮಾತುಕತೆ ನಡೆಸಬೇಕೆಂದು ಪ್ರಧಾನಿ ಸಲಹೆ ನೀಡಿದ್ದಾರೆ’ ಎಂದರು.

‘ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ’ ಎಂದರು.

‘ಬೆಂಗಳೂರು ಅತಿ ಹೆಚ್ಚು ತೆರಿಗೆ ನೀಡುವ ನಗರ. ಈ ನಗರಕ್ಕೆ ಕೇಂದ್ರ ಬಜೆಟ್ನಲ್ಲಿ ನಯಾಪೈಸೆ ಅನುದಾನ ಸಿಕ್ಕಿಲ್ಲ. ಮಹಾರಾಷ್ಟ್ರದಂತೆ ನಮ್ಮನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿದೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜೆಎನ್ ನರ್ಮ್ ಯೋಜನೆ ಅಡಿ ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಾಳ, ನೆಲಮಂಗಲ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು’ ಎಂದರು.

‘ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಮಾಡಲು ಸಾಧ್ಯ. ಎರಡು ಪ್ರದೇಶಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ತಿಳಿದರು. ರಾಜ್ಯ ರಾಜಧಾನಿಯಲ್ಲಿ ನೂತನವಾಗಿ ಒಂದಷ್ಟು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಆದ ಕಾರಣ ಈ ಯೋಜನೆಗಳಿಗೂ ಕೇಂದ್ರ ಸರ್ಕಾರ ನೆರವಾಗಬೇಕು ಎಂದು ಕೇಳಲಾಗಿದೆ’ ಎಂದರು.

‘ಕಳೆದ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದರು’ ಎಂದರು.

ಬಳಿಕ ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ, ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ, ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಮನೋಹರ್ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪ್ರಧಾನಿಗೆ ಅಹವಾಲು

ಸುಮಾರು 77.6 ಕಿಮೀನಷ್ಟು ವಿವಿಧ ರಾಷ್ಟ್ರೀಯ ಹೆದ್ದಾರಿ ರಸ್ತೆ ಜಾಲವು ಬೆಂಗಳೂರು ನಗರದಲ್ಲಿ ಹಾದು ಹೋಗುತ್ತದೆ. ಹೊಸೂರು- ಬಳ್ಳಾರಿ ರಸ್ತೆ ಮತ್ತು ಕೆ.ಆರ್ ಪುರದಿಂದ ಮೈಸೂರು ರಸ್ತೆಯ ತನಕ ಸುರಂಗ ರಸ್ತೆ ಮತ್ತು ಎಲೆವೇಟೆಡ್ ಕಾರಿಡಾರ್ ನಿರ್ಮಾಣದಿಂದ ಸಂಚಾರ ದಟ್ಟಣೆ ತಪ್ಪಿಸಬಹುದು. ಈ ಯೋಜನೆಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಡಿಯಲ್ಲಿ ಕೇಂದ್ರ ಸರ್ಕಾರ ಸಹಕಾರ ನೀಡಬೇಕು.

ಮೆಟ್ರೊ 3ನೇ ಹಂತಕ್ಕೆ ಕೇಂದ್ರ ಸರ್ಕಾರ ಕೂಡಲೇ ಒಪ್ಪಿಗೆ ನೀಡಬೇಕು.

ಮೆಟ್ರೊ ಮಾರ್ಗ ಹಾಗೂ ಮೇಲ್ಸೇತುವೆ ಇರುವಂತಹ ಡಬಲ್ ಡೆಕ್ಕರ್ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನಿಡಬೇಕು.

ಬೆಂಗಳೂರಿನಲ್ಲಿ 73.01 ಕಿಮೀ ಉದ್ದದ ಫೆರಿಫೆರಲ್ ಹೊರವರ್ತುಲ ರಸ್ತೆ ನಿರ್ಮಾಣವನ್ನು ಪಿಪಿಪಿ ಮಾದರಿಯಲ್ಲಿ ಮಾಡಲು ಸರ್ಕಾರ ಮುಂದಾಗಿದೆ. ಇದಕ್ಕೆ ಅಂದಾಜು ₹27 ಸಾವಿರ ಕೋಟಿ ಖರ್ಚಾಗಬಹುದು. ಇದರಲ್ಲಿ ಸುಮಾರು ₹21 ಸಾವಿರ ಕೋಟಿ ಹಣ ಭೂಸ್ವಾಧೀನಕ್ಕೆ ₹6 ಸಾವಿರ ಕೋಟಿ ನಿರ್ಮಾಣ ವೆಚ್ಚಕ್ಕೆ ಖರ್ಚು ಆಗಲಿದೆ. ಇದಕ್ಕೆ ಕೇಂದ್ರ ನೆರವು ನೀಡಬೇಕು.

ಬೆಂಗಳೂರು ಹಾಗೂ ಸುತ್ತಲಿನ ನೀರಿನ ಮೂಲಗಳ ಅಭಿವೃದ್ಧಿಗೆ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ₹6 ಸಾವಿರ ಕೋಟಿ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡಬೇಕು.

ಕರ್ನಾಟಕಕ್ಕೆ 173 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿ ‘ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣ–2’ 2013ಲ್ಲಿ ತೀರ್ಪು. ತೀರ್ಪನ್ನು ಗೆಜೆಟ್ನಲ್ಲಿ ಪ್ರಕಟಿಸಬೇಕು.

ಮಹದಾಯಿ ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ಸೂಚಿಸಿದೆ. ಈ ಯೋಜನೆಗೆ ಪರಿಸರ ಇಲಾಖೆಯ ಅನುಮತಿ ಕೊಡಿಸಬೇಕು.

ಪ್ರಸ್ತಾವಿತ ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕಕ್ಕೆ ನ್ಯಾಯಯುತವಾಗಿ ನೀರು ಹಂಚಿಕೆಯಾಗಬೇಕು. ನದಿ ಜೋಡಣೆಯಿಂದ ಲಭ್ಯವಾಗುವ 147 ಟಿಎಂಸಿ ನೀರಿನಲ್ಲಿ ಕರ್ನಾಟಕಕ್ಕೆ 15.89 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಈ ಅನ್ಯಾಯ ಸರಿಪಡಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.