ಹಾವೇರಿ: ನಗರದಲ್ಲಿ ಜನವರಿ 6,7 ಮತ್ತು 8ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ಬರಲು ಇಚ್ಛಿಸುವವರು ಕಡ್ಡಾಯವಾಗಿ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿರಬೇಕು ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ನಡೆದ ಸಾಹಿತ್ಯ ಸಮ್ಮೇಳನದ ಸ್ವಾಗತಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಸಾಹಿತ್ಯ ಸಮ್ಮೇಳನಕ್ಕೆ ₹500 ಪ್ರತಿನಿಧಿ ಶುಲ್ಕ ನಿಗದಿಪಡಿಸಲಾಗಿದೆ. ಕಸಾಪ ಸಮ್ಮೇಳನಕ್ಕಾಗಿ ಸಿದ್ಧಪಡಿಸಿರುವ ಆ್ಯಪ್ ಮೂಲಕ ಡಿ.1ರಿಂದ ಡಿ.18ರವರೆಗೆ ನೋಂದಣಿ ಮಾಡಿಕೊಳ್ಳಬಹುದು. ಆ್ಯಪ್ ಮೂಲಕವೇ ಪರಿಷತ್ ಸದಸ್ಯರಾಗಬಹುದು. ಸಮ್ಮೇಳನಕ್ಕೆ 20 ಸಾವಿರ ಪ್ರತಿನಿಧಿಗಳಿಗೆ ಅವಕಾಶವಿದ್ದು, ಮೊದಲು ನೋಂದಣಿ ಮಾಡಿಕೊಂಡವರಿಗೆ ಆದ್ಯತೆ ಸಿಗಲಿದೆ ಎಂದು ಹೇಳಿದರು.

16 ಉಪಸಮಿತಿಗಳ ರಚನೆ:

ಸ್ವಾಗತ ಸಮಿತಿ, ಸಮನ್ವಯ ಸಮಿತಿ, ವೇದಿಕೆ ನಿರ್ಮಾಣ ಸಮಿತಿ, ಆಹಾರ ಸಮಿತಿ, ಮೆರವಣಿಗೆ ಸಮಿತಿ, ವಸತಿ ಸಮಿತಿ ಸೇರಿದಂತೆ ಒಟ್ಟು 16 ಉಪಸಮಿತಿಗಳನ್ನು ರಚಿಸಿ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು.

ಮರಾಠಿಗರಿಗೆ ಸಂದೇಶ:

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿ, ರಾಜ್ಯದ ಗಡಿ ವಿಚಾರದಲ್ಲಿ ಪದೇ ಪದೇ ವಿವಾದ ಸೃಷ್ಟಿಸುತ್ತಿರುವ ಮಹಾರಾಷ್ಟ್ರದ ಕನ್ನಡ ವಿರೋಧಿ ಮಂದಿಗೆ ಅಭೂತಪೂರ್ವವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಮೂಲಕ ಉತ್ತರ ಕೊಡಲಾಗುವುದು. ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ಕನ್ನಡಿಗರೆಲ್ಲರೂ ಒಗ್ಗಾಟ್ಟಾಗಿದ್ದೇವೆ ಎಂಬ ಸಂದೇಶ ನೀಡಲಿದ್ದೇವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.