ಬೀದರ್: ‘ಸಂಸದ ಅನಂತಕುಮಾರ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆಗಳನ್ನು ಕೊಡುತ್ತಿದ್ದು, ಅವರಿಗೆ ಜನರೇ ಪಾಠ ಕಲಿಸುತ್ತಾರೆ’ಎಂದು ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಇಲ್ಲಿನ ಜಿಲ್ಲಾ ರಂಗಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಬೀದರ್ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೆಗಡೆ ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ಒಡೆದಾಳುವ ನೀತಿ ಅನುಸರಿಸಬೇಕು ಅಂತಾರೆ. ಭಾವನಾತ್ಮಕ ವಿಷಯಗಳನ್ನ ಕೆಣಕುತ್ತಾ ಇದ್ದಾರೆ. ಸಮಾಜವಿರೋಧಿ ಹೇಳಿಕೆಗಳನ್ನು ಮೊದಲಿಂದಲೂ ಕೊಡುತ್ತ ಬಂದಿದ್ದಾರೆ. ಜನ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಅನಂತಕುಮಾರ ಹೆಗಡೆ ಅವರಿಗೆ ಇನ್ನಾದ್ರು ಒಳ್ಳೆಯ ಬುದ್ದಿ ಬರಲಿ ಎಂದರು.

ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ಈಗಾಗಲೇ ಸಿ.ಎಂ ಹೇಳಿಕೆಯನ್ನು ಕೊಟ್ಟಿದ್ದಾರೆ. ನಾನೇನೂ ಹೇಳಲಾರೆ. ಅವರ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.