ಬೀದರ್: ‘ವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ಇಟ್ಟುಕೊಂಡವರು ಎರಡು ತಿಂಗಳಲ್ಲಿ ವಾಪಸ್ ಕೊಡಲೇಬೇಕು. ಇಂತಹದ್ದೊಂದು ಪ್ರಸ್ತಾವ ನಮ್ಮ ಮುಂದಿದ್ದು, ಸೋಮವಾರ (ಅ.30) ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಾರ ಬಳಿಯಾದರೂ ವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳಿದ್ದರೆ ವಾಪಸ್ ಕೊಡಬೇಕಾಗುತ್ತದೆ. ಯಾರು ಕೂಡ ಅವರ ಬಳಿ ಇಟ್ಟುಕೊಳ್ಳಲು ಬರುವುದಿಲ್ಲ. ಈ ಬಗ್ಗೆ ಸಿ.ಎಂ. ಜೊತೆಗೂ ಚರ್ಚಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.