ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಬಿಳಿಜೋಳ ಹಾಗೂ ಅಕ್ಕಿ ಸರಬರಾಜು ಮಾಡಿರುವ ರಾಜ್ಯದ ಏಜೆನ್ಸಿಗಳಿಗೆ ಕೇಂದ್ರ ಸರ್ಕಾರ ₹2,040 ಕೋಟಿ ಉಳಿಸಿಕೊಂಡಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆಹಾರ ಮತ್ತು ನಾಗರಿಕ ವ್ಯವಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪೀಯೂಷ್ ಗೋಯಲ್ ಅವರಿಗೆ ಮಂಗಳವಾರ ಮನವಿ ಮಾಡಿದರು.

‘2009–10ರಿಂದಲೂ ಕೇಂದ್ರ ಸರ್ಕಾರವು ರಾಜ್ಯದ ಏಜೆನ್ಸಿಗಳ ಹಣವನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸಿಲ್ಲ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದು ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ಕೇಂದ್ರ ಈ ಸಂಬಂಧ ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ಈ ವರ್ಷ ಹೈಬ್ರಿಡ್ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ ₹3,180 ಹಾಗೂ ಮಾಲ್ಡಂಡಿ ಜೋಳಕ್ಕೆ ಕ್ವಿಂಟಲ್‌ಗೆ ₹ 3,225 ನಿಗದಿ ಮಾಡಲಾಗಿದೆ. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಮಾಲ್ಡಂಡಿ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ₹4,500 ನಿಗದಿ ಮಾಡಬೇಕು. ಈ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.