ಈ ಹಿನ್ನಲೆಯಲ್ಲಿ ಇದೊಂದು ವಿಶೇಷ ಪ್ರಕರಣ ವೆಂದು ಪರಿಗಣಿಸಿ ಸಾರಿಗೆ ಉದ್ದಿಮೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ಸ್ಟೇಜ್ ಕ್ಯಾರೇಜ್ ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ವಾಹನಗಳಿಗೆ ತೆರಿಗೆ ಪಾವತಿಸಲು ಒಂದು ತಿಂಗಳ ಕಾಲಾವಕಾಶ ನೀಡಿರುತ್ತದೆ. ಆಗಸ್ಟ್ 15 ರಂದು ಪಾವತಿಸಬೇಕಿದ್ದ ರಸ್ತೆ ತೆರಿಗೆಯನ್ನು ಸೆಪ್ಟೆಂಬರ್ 15 ರವರೆಗೆ,2/3
ಹಾಗೂ ಸೆಪ್ಟೆಂಬರ್ 15 ರಂದು ಪಾವತಿಸಬೇಕಿದ್ದ ರಸ್ತೆ ತೆರಿಗೆಯನ್ನು ಅಕ್ಟೊಬರ್ 15 ರವರೆಗೆ ದಂಡರಹಿತವಾಗಿ ಪಾವತಿಸಲು ವಿಸ್ತರಿಸಲಾಗಿದೆ. ಇದರಿಂದ ಸುಮಾರು 40 ಸಾವಿರ ಬಸ್ ಮಾಲೀಕರಿಗೆ ಅನುಕೂಲವಾಗಲಿದೆ. 3/3