ಬಿಡದಿ: ವಿಜಯನಗರ (ಹೊಸಪೇಟೆ) ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಬಂಧನವಾಗಿದೆ.

ಬಿಡದಿ ಪೊಲೀಸರು ಬುಧವಾರ ಹೊರ ರಾಜ್ಯದಲ್ಲಿ ಆರೋಪಿಯನ್ನು ಬಂಧಿಸಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ.

ಗಣೇಶ್ರನ್ನು ರಾಮನಗರ ಜಿಲ್ಲಾ ನ್ಯಾಯಾಧೀಶರು ಇಲ್ಲವೇ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:ಆನಂದ್ ಸಿಂಗ್ ಮೇಲೆ ಹಲ್ಲೆ; ಗುಟ್ಟು ರಟ್ಟು ಮಾಡಿದ್ದಕ್ಕೆ ಸಿಟ್ಟು

ಕಳೆದ ಜನವರಿ 20ರಂದು ಬಿಡದಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ಆನಂದ್ ಸಿಂಗ್ ಮೇಲೆ ಗಣೇಶ್ ಹಲ್ಲೆ ಮಾಡಿದ್ದರು. ಆರೋಪಿ ವಿರುದ್ಧ ಬಿಡದಿ ಠಾಣೆಯಲ್ಲಿ ಕೊಲೆ ಯತ್ನ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು.

ಘಟನೆಯಲ್ಲಿ ಆನಂದ್ ಸಿಂಗ್ ಅವರ ತಲೆ ಹಾಗೂ ಕಿಬ್ಬೊಟ್ಟೆಗೆ ಗಾಯವಾಗಿತ್ತು, ಅವರನ್ನು ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಗೆ ದಾಖಲಿಸಿಚಿಕಿತ್ಸೆ ನೀಡಲಾಗಿತ್ತು. ಆನಂದ್ ಸಿಂಗ್ ಒಂದು ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಈ ಘಟನೆ ನಡೆದ ಬಳಿಕ ಶಾಸಕ ಗಣೇಶ್ ನಾಪತ್ತೆಯಾಗಿದ್ದರು.

ಇದನ್ನೂ ಓದಿ:‘ಆಪರೇಷನ್’ ಮಾಹಿತಿ ಸೋರಿಕೆಯಿಂದಾಗಿ ಹೊಯ್ಕೈ;ಆಸ್ಪತ್ರೆಗೆ ದಾಖಲಾದ ಆನಂದ್ ಸಿಂಗ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.