ಬೆಂಗಳೂರು: ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಸುತ್ತೋಲೆ ಹೊರಡಿಸಲಾಗಿದೆ.

ದೇವಾಲಯದ ಆವರಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚುತ್ತಿದೆ. ಭಕ್ತರು ದೇವಾಲಯಕ್ಕೆ ಬಂದಾಗ ಮೊಬೈಲ್ ಬಳಕೆಯ ಶಬ್ದದಿಂದ ದೇವಾಲಯದ ಸಿಬ್ಬಂದಿ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಏಕ ಮನಸ್ಸಿನಿಂದ ಧ್ಯಾನ, ಪೂಜಾದಿಗಳನ್ನು ನಡೆಸಲು ತೊಂದರೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ದೇವರ ದರ್ಶನ ಸಮಯದಲ್ಲಿ ಭಕ್ತರು ತಮ್ಮ ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಮಾಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ.

ಈ ಬಗ್ಗೆ ಸೂಚನಾ ಪತ್ರದಲ್ಲಿ ಮಾಹಿತಿ ನೀಡುವಂತೆ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.