ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಲ್ಲಿದ್ದ ₹90 ಕೋಟಿಗೂ ಹೆಚ್ಚು ಮೊತ್ತವನ್ನು ಅಕ್ರಮವಾಗಿ ಹೈದರಾಬಾದ್ನ ಬಂಜಾರಾ ಹಿಲ್ಸ್ ಆರ್ಬಿಎಲ್ ಬ್ಯಾಂಕ್ನಲ್ಲಿರುವ ಖಾತೆಗಳಿಗೆ ವರ್ಗಾವಣೆ ಮಾಡಿರುವ ಹಗರಣದಲ್ಲಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಮತ್ತು ಲೆಕ್ಕಾಧಿಕಾರಿ ಪರಶುರಾಮ್ ಜಿ. ದುರುಗಣ್ಣವರ್ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ)ಶನಿವಾರ ಬಂಧಿಸಿದೆ.

ಹಗರಣದ ತನಿಖೆಗೆ ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ಎಸ್ಐಟಿ ರಚಿಸಿ ಶುಕ್ರವಾರ ಆದೇಶ ಹೊರಡಿಸಲಾಗಿತ್ತು. ಶನಿವಾರದಿಂದ ತನಿಖೆ ಆರಂಭಿಸಿರುವ ಎಸ್ಐಟಿ, ಪದ್ಮನಾಭ ಮತ್ತು ಪರಶುರಾಮ್ ಅವರನ್ನು ಬಂಧಿಸಿದೆ.

ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಅವರು ಬಂಧಿತ ಇಬ್ಬರು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳು ಒತ್ತಡ ಹೇರಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ ಎಂದು ಆರೋಪಿಸಿ ಪತ್ರ ಬರೆದಿಟ್ಟು ಶಿವಮೊಗ್ಗದಲ್ಲಿ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಚಂದ್ರಶೇಖರನ್ ಆತ್ಮಹತ್ಯೆ, ನಿಗಮದ ಹಣದ ಅಕ್ರಮ ವರ್ಗಾವಣೆ ಮತ್ತು ನಿಗಮದಲ್ಲಿನ ಆರ್ಥಿಕ ಅವ್ಯವಹಾರಗಳ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ.

ಹಣದ ಅಕ್ರಮ ವರ್ಗಾವಣೆ ಕುರಿತು ಯೂನಿಯನ್ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಣಿಮೇಖಲೈ ಸೇರಿದಂತೆ ಹಲವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳು, ನಿಗಮದ ಕೆಲವು ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿರುವ ಎಸ್ಐಟಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಖಾತೆಗೆ ಸಂಬಂಧವಿಲ್ಲ: ಹ್ಯಾಪಿಯೆಸ್ಟ್ ಮೈಂಡ್ಸ್

ಹೈದರಾಬಾದ್ನ ಆರ್ಬಿಎಲ್ ಬ್ಯಾಂಕ್ನಲ್ಲಿ ‘ಹ್ಯಾಪಿಯೆಸ್ಟ್ ಮೈಂಡ್ಸ್ ಟೆಕ್ನಾಲಜೀಸ್ ಲಿಮಿಟೆಡ್’ ಹೆಸರಿನಲ್ಲಿರುವ ಖಾತೆಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ನಗರದ ಹ್ಯಾಪಿಯೆಸ್ಟ್ ಮೈಂಡ್ಸ್ ಟೆಕ್ನಾಲಜೀಸ್ ಲಿಮಿಟೆಡ್ ಕಂಪನಿ ತಿಳಿಸಿದೆ.

ಆರ್ಬಿಎಲ್ ಬ್ಯಾಂಕ್ನ ಬಂಜಾರಾ ಹಿಲ್ಸ್ ಶಾಖೆಯಲ್ಲಿ ‘ಹ್ಯಾಪಿಯೆಸ್ಟ್ ಮೈಂಡ್ಸ್ ಟೆಕ್ನಾಲಜೀಸ್ ಲಿಮಿಟೆಡ್’ ಹೆಸರಿನಲ್ಲಿರುವ ಖಾತೆಗೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ₹ 4.53 ಕೋಟಿ ವರ್ಗಾವಣೆ ಆಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಕಂಪನಿ, ‘ಹ್ಯಾಪಿಯೆಸ್ಟ್ ಮೈಂಡ್ಸ್ ಟೆಕ್ನಾಲಜೀಸ್ ಲಿಮಿಟೆಡ್’ ಹೆಸರಿನಲ್ಲಿರುವ ಆ ಬ್ಯಾಂಕ್ ಖಾತೆ ತನ್ನದಲ್ಲ ಎಂದು ಹೇಳಿದೆ. ಬ್ಯಾಂಕ್ನಿಂದ ಪಡೆದಿರುವ ದೃಢೀಕರಣ ಪತ್ರವನ್ನೂ ಲಗತ್ತಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.