ಬೆಂಗಳೂರು: ವಿವಿಧ ಜಿಲ್ಲೆಗಳ ವಿವಿಧ ಮಠಗಳ ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಡಿಸಿಎಂ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶ್ರೀಗಳು; ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದೂ ಸೇರಿ ಕೆಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡುವುದು ಹಾಗೂ ಸಂಸ್ಕೃತ ಪ್ರಸರಣೆಗೆ ಸೂಕ್ತ ಪ್ರೋತ್ಸಾಹ ಹಾಗೂ ಬಯಲುಸೀಮೆಯ ಈ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಬಗ್ಗೆ ಸ್ವಾಮೀಜಿಗಳು ಅಶ್ವತ್ಥನಾರಾಯಣ ಅವರ ಜತೆ ಮಾತುಕತೆ ನಡೆಸಿದರು.

ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್ ವತಿಯಿಂದ ಕೊಳದ ಮಠದ ಶಾಂತವೀರ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು ಆಗಮಿಸಿದ್ದರು.

ಸ್ವಾಮೀಜಿ ನೀಡಿದ ಮನವಿ ಪತ್ರ ಸ್ವೀಕರಿಸಿದ ಡಿಸಿಎಂ ಅವರು, ಅತಿ ಶೀಘ್ರದಲ್ಲೇ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ನಮ್ಮ ಸರ್ಕಾರ ನೀರಾವರಿ ಯೋಜನೆಗಳ ಅನುಷ್ಠಾಕ್ಕೆ ಆದ್ಯತೆ ನೀಡಲಿದೆ ಎಂದು ಸ್ವಾಮೀಜಿಗಳಿಗೆ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.