ಬೆಂಗಳೂರು: ಹೊಸಕೋಟೆಯಲ್ಲಿ ತಮ್ಮ ಸೋಲಿಗೆ ಸಂಸದ ಬಿ.ಎನ್. ಬಚ್ಚೇಗೌಡ ಮತ್ತು ಬಿಜೆಪಿ ಕಾರ್ಯಕರ್ತರೇ ಕಾರಣ ಎಂದು ಪರಾಜಿತ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಹೇಳಿರುವುದು ವರಿಷ್ಠರಿಗೆ ಮುಜುಗರ ಉಂಟು ಮಾಡಿದೆ.

ಈ ಹಿನ್ನೆಲೆಯಲ್ಲಿ ಪಕ್ಷ ಬಚ್ಚೇಗೌಡರ ವಿರುದ್ಧ ಕ್ರಮ ತೆಗೆದುಕೊಳ್ಳಲಿದೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಶ್ನಿಸಿದಾಗ, ‘ಎಲ್ಲ ವಿದ್ಯಮಾನಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇವೆ’ ಎಂದು ಅವರು ಹೇಳಿದರು.

ಆದರೆ, ಬಚ್ಚೇಗೌಡರ ವಿರುದ್ಧ ಕ್ರಮ ಕೈಗೊಳ್ಳುವುದರ ಕುರಿತು ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಬಿಜೆಪಿಯಲ್ಲಿ ಒಂದು ಗುಂಪು ಶರತ್ ಪರ ನಿಂತಿದ್ದೂ ಅಲ್ಲದೆ, ಅವರ ಗೆಲುವಿಗಾಗಿ ಶ್ರಮಿಸಿತು. ಪಕ್ಷ ಟಿಕೆಟ್ ನೀಡಲು ನಿರಾಕರಿಸಿದಾಗ ಶರತ್ಗೆ ಜೆಡಿಎಸ್ ಗಾಳ ಹಾಕಿತ್ತು.

ಈ ಸಂದರ್ಭದಲ್ಲಿ ಬಿಜೆಪಿಯ ಕೆಲವು ನಾಯಕರು ಜೆಡಿಎಸ್ಗೆ ಹೋಗದೇ ಪಕ್ಷೇತರವಾಗಿ ಸ್ಪರ್ಧಿಸುವಂತೆ ಶರತ್ ಅವರ ಮನವೊಲಿಸಿ, ಸಹಕಾರ ನೀಡುವುದಾಗಿಯೂ ಭರವಸೆ ನೀಡಿದ್ದರು. ಇದರಿಂದಾಗಿ ಹೊಸಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಶರತ್ ಬೆನ್ನಿಗಿದ್ದರು ಎಂದು ಹೇಳಲಾಗಿದೆ.

ಬಿ.ಎನ್.ಬಚ್ಚೇಗೌಡ ಅವರು ಬಹಿರಂಗವಾಗಿ ಪುತ್ರನ ಪರವಾಗಿ ಕಾಣಿಸಿಕೊಂಡು ಪ್ರಚಾರ ನಡೆಸಿಲ್ಲ. ಪಕ್ಷದ ವಿರುದ್ಧ ಹೇಳಿಕೆಗಳನ್ನೂ ನೀಡಿಲ್ಲ. ಬಹಳ ಕಾಲದಿಂದಲೂ ಪಕ್ಷದಲ್ಲೇ ಇರುವುದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇಲ್ಲ.

ಎಂ.ಟಿ.ಬಿ.ನಾಗರಾಜ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿ ಮಂತ್ರಿ ಸ್ಥಾನ ನೀಡಿ ಸಮಾಧಾನಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.