ಶುಕ್ರವಾರ, 27 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Muda Case | ಹೈಕೋರ್ಟ್ ತೀರ್ಪು ರಾಜಕೀಯಪ್ರೇರಿತ ಎಂದಿಲ್ಲ: ಜಮೀರ್ ಅಹಮದ್

Published : 26 ಸೆಪ್ಟೆಂಬರ್ 2024, 14:38 IST
Last Updated : 26 ಸೆಪ್ಟೆಂಬರ್ 2024, 14:38 IST
ಫಾಲೋ ಮಾಡಿ
Comments

ಬೆಂಗಳೂರು: ‘ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಒಂದೊಮ್ಮೆ ಬಾಯಿ ತಪ್ಪಿ ಹೇಳಿದ್ದರೆ ಕ್ಷಮೆ ಯಾಚಿಸಲು ಸಿದ್ಧ’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

‘ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಿದ್ದೇವೆ. ಹೈಕೋರ್ಟ್ ತೀರ್ಪು ಬಂದ ನಂತರ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ. ತೀರ್ಪುನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ ಎಂಬುದು ನನ್ನ ಅಭಿಪ್ರಾಯ ಆಗಿತ್ತು’ ಎಂದಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ತನಿಖೆಯಾಗಲಿ, ಕಾನೂನು ಹೋರಾಟ ಎದುರಿಸುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್, ಶಾಸಕರು, ಸಚಿವರು ಮುಖ್ಯಮಂತ್ರಿಯ ಜೊತೆಗಿದ್ದು, ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದೂ ಹೇಳಿದ್ದೆ. ಅದನ್ನು ಹೊರತುಪಡಿಸಿ, ನ್ಯಾಯಾಲಯದ ತೀರ್ಪಿನ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ರಾಜಕೀಯಪ್ರೇರಿತ ಆರೋಪ ಇದಾಗಿದೆ ಎಂಬುದೇ ನನ್ನ ವಾದ ಆಗಿತ್ತು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT