ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಕೋರಲಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರಕ್ಕೆ (ನ.5) ನಿಗದಿಗೊಳಿಸಿದೆ.

ಈ ಸಂಬಂಧ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದಾಖಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಮಂಗಳವಾರದ ವಿಚಾರಣಾ ಪಟ್ಟಿಯಲ್ಲಿ ನಮೂದು ಮಾಡಿದೆ.

ಅರ್ಜಿಯಲ್ಲಿ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಿಬಿಐ ನಿರ್ದೇಶಕ, ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ರಾಜ್ಯ ಡಿಜಿ–ಐಜಿಪಿ, ಲೋಕಾಯುಕ್ತ ಎಡಿಜಿಪಿ, ವಿಜಯನಗರ ಪೊಲೀಸ್ ಠಾಣಾಧಿಕಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಂ.ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ಜೆ.ದೇವರಾಜು ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.