ಬೆಂಗಳೂರು: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸರಿಯಲ್ಲ ಎಂದಿದ್ದಾರೆ.

ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದೂ ಅವರು ಕಿಡಿ ಕಾರಿದ್ದಾರೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರಗಳನ್ನು ಬೀಳಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಎರಡು ಬಾರಿ ವಾಮಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಖಂಡ್ರೆ ಹೇಳಿದ್ದಾರೆ.

ಜನಪರವಾದ ಆಡಳಿತ ನೀಡುತ್ತಾ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಕುಗ್ಗಿಸಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ. ಇತ್ತೀಚೆಗೆ ದೆಹಲಿಗೆ ರಾಜ್ಯಪಾಲರನ್ನು ಕರೆಸಿಕೊಂಡು ಅವರಿಗೆ ಸ್ಪಷ್ಟ ಸೂಚನೆ ನೀಡಿ ಕಳಿಸಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ.

ರಾಜ್ಯದ ಜನತೆ ಇದನ್ನು ಕ್ಷಮಿಸುವುದಿಲ್ಲ ಕಾಂಗ್ರೆಸ್ ಪಕ್ಷ ರಾಜ್ಯಪಾಲರ ಪಕ್ಷಪಾತ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಿದೆ. ಜನರ ಬೆಂಬಲ ಸರ್ಕಾರದ ಪರವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ರಾಜ್ಯಪಾಲರು, ತಾನು ಅನುಸರಿಸಿರುವ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಅವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು ಎಂದು ಖಂಡ್ರೆ ಒತ್ತಾಯಿಸಿದ್ದಾರೆ.
.ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ.ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ: ಹೋರಾಟಕ್ಕೆ ‘ಕೈ’ ನಿರ್ಧಾರ.ರಾಜ್ಯಪಾಲರು ಕೇಂದ್ರದ ಕೈಗೊಂಬೆ; ರಾಜಭವನ BJP ಕಚೇರಿಯಾಗಿದೆ: ಸಚಿವ MB ಪಾಟೀಲ ಟೀಕೆ.MUDA Scam | ಪಾರದರ್ಶಕ ತನಿಖೆಯಾಗಲಿ, ಸಿಎಂ ರಾಜೀನಾಮೆಗೆ ವಿಜಯೇಂದ್ರ ಆಗ್ರಹ.MUDA Scam | 3,500 ನಿವೇಶನಗಳ ಲೆಕ್ಕವೇ ಇಲ್ಲ!.MUDA Scam | 1984ರಲ್ಲೇ ಬದಲಿ ನಿವೇಶನ ಪಡೆದಿದ್ದ ಸಿದ್ದರಾಮಯ್ಯ.ಸಿದ್ದರಾಮಯ್ಯ ಪತ್ನಿಗೆ ನೀಡಿರುವ MUDA ನಿವೇಶನ ವಾಪಸ್ ಪಡೆಯಲು TJ ಅಬ್ರಹಾಂ ಮನವಿ.MUDA Scam | ರಾಜಭವನ ಜತೆ ಸರ್ಕಾರ ಸಂಘರ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.