ರಾಮನಗರ (ಮಾಗಡಿ): ಬಿಜೆಪಿಯಿಂದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ ಒಂದು ಕೂದಲು ಸಹ ಅಲುಗಾಡಿಸಲು ಸಾಧ್ಯವಿಲ್ಲ. ರಾಜ್ಯಪಾಲರು ಈ ಮಟ್ಟಕ್ಕೆ ಇಳಿಯುತ್ತಾರೆ ಅಂತ ಅಂದುಕೊಂಡಿರಲಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಕುರಿತು ಶನಿವಾರ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಸಿದ್ದರಾಮಯ್ಯ ಅವರು ರಾಜ್ಯ ಕಂಡ ಏಕೈಕ ಅತ್ಯುತ್ತಮ ನಾಯಕ. ಅಧಿಕಾರದಲ್ಲಿದ್ದಾಗ ಕುಟುಂಬದವರನ್ನು ಅಕ್ಕಪಕ್ಕ ಸೇರಿಸದೆ ಆಡಳಿತ ಮಾಡಿದ್ದಾರೆ. ಬಿಜೆಪಿಯವರು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಆಗದೇ ಇರೋ ವಿಚಾರವನ್ನು ಅವರ ಹಣೆಗೆ ಕಟ್ಟುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯವರಿಗೆ ಸಿದ್ದರಾಮಯ್ಯ ಅವರ ಜನಪ್ರಿಯತೆ ಸಹಿಸಲು ಆಗುತ್ತಿಲ್ಲ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ, ನಮ್ಮ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ. ಬಹುಶಃ ಇದರಿಂದ ಅವರಿಗೆ ಯಾವುದೇ ಅನುಕೂಲ ಆಗುವುದಿಲ್ಲ ಎಂದು ಕಿಡಿಕಾರಿದರು.

ದ್ವೇಷದ ರಾಜಕಾರಣ ಮಾಡಿ ರಾಜ್ಯವನ್ನು ಬಾಂಗ್ಲಾದೇಶ ಮತ್ತು ಶ್ರೀಲಂಕಾ ಸ್ಥಿತಿಗೆ ತರುವ ಪ್ರಯತ್ನವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಇಷ್ಟೊಂದು ದ್ವೇಷದ ರಾಜಕಾರಣ ಮಾಡಿರೋ ಉದಾಹರಣೆಯೇ ಇಲ್ಲ.

ಇದರಿಂದ ನಮ್ಮ ಸಿದ್ದರಾಮಯ್ಯ ಅವರ ಒಂದು ಕೂದಲನ್ನೂ ಬಗ್ಗಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು.
.ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ.ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ: ಹೋರಾಟಕ್ಕೆ ‘ಕೈ’ ನಿರ್ಧಾರ.ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ; ಕೇಂದ್ರದ ಕೈವಾಡ: ಪ್ರಿಯಾಂಕ್ ಖರ್ಗೆ.MUDA Scam|ಸಿಎಂ ವಿರುದ್ಧ ತನಿಖೆಗೆ ಅನುಮತಿ: ರಾಜ್ಯಪಾಲರ ಆದೇಶದಲ್ಲಿ ಹೇಳಿದ್ದೇನು?.MUDA Scam | ಪಾರದರ್ಶಕ ತನಿಖೆಯಾಗಲಿ, ಸಿಎಂ ರಾಜೀನಾಮೆಗೆ ವಿಜಯೇಂದ್ರ ಆಗ್ರಹ.CM ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ; BJP ಪಾದಯಾತ್ರೆಗೆ ಸಿಕ್ಕ ಜಯ: ಅಶೋಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.