ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಕಿಡಿಕಾರಿದ್ದಾರೆ.

ಶನಿವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 'ಟಿ.ಜೆ. ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟಿಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ' ಎಂದರು.

ಎಚ್.ಡಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಎಂಟರಿಂದ ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು, ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ ಎಂದು ಅವರು ಆರೋಪಿಸಿದರು.

ಕೇಂದ್ರದ ಬಿಜೆಪಿ ಸರ್ಕಾರವು ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ ಎಂದು ಅವರು ಟೀಕಿಸಿದರು.

ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರ್ಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯ ಅವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ ಎಂದು ಅವರು ಪ್ರತಿಪಾದಿಸಿದರು.
.ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ.ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ: ಹೋರಾಟಕ್ಕೆ ‘ಕೈ’ ನಿರ್ಧಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.