ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಭಯಂಕರ ಸರ್ವಾಧಿಕಾರಿ, ಅಹಂಕಾರಿ ಮತ್ತು ಭ್ರಷ್ಟ. ಕಾಂಗ್ರೆಸ್ ಹೈಕಮಾಂಡ್ ಬಳಿ ಕಮಾಂಡ್ ಇದ್ದರೆ ಸಿದ್ದರಾಮಯ್ಯ ಅವರನ್ನು ತಕ್ಷಣ ಹುದ್ದೆಯಿಂದ ಕೆಳಕ್ಕೆ ಇಳಿಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೈಸೂರು ಮುಡಾ ಹಗರಣವನ್ನು ಖಂಡಿಸುವ, ಪ್ರತಿಭಟಿಸುವ ಹಕ್ಕೂ ನಮಗಿಲ್ಲವೇ? ಪ್ರಶ್ನಿಸುವುದೂ ತಪ್ಪು ಎನ್ನುವಂತೆ ಅವರು ವರ್ತಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

‘ಸಿದ್ದರಾಮಯ್ಯ ಅವರಿಗೆ ನಾಚಿಕೆ, ಮಾನ– ಮರ್ಯಾದೆ ಇದೆಯೇ? 2023 ರಲ್ಲಿ ನಿವೇಶನಗಳ ಮೌಲ್ಯವನ್ನು ಅವರೇ ₹8 ಕೋಟಿ ಎಂದು ಘೋಷಿಸಿ, ಈಗ ₹62 ಕೋಟಿ ಕೇಳುತ್ತಿದ್ದಾರೆ. ಇದು ಹೇಗೆ ಸಾಧ್ಯ? ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ತಾರ್ಕಿಕ ಅಂತ್ಯ ಮುಟ್ಟಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ವಿರೋಧಪಕ್ಷದ ನಾಯಕರ ನೇತೃತ್ವದಲ್ಲಿ ಹೋರಾಟ ಮುಂದುವರೆಯುತ್ತದೆ’ ಎಂದರು.

ವಾಲ್ಮೀಕಿ ನಿಗಮದ ಹಗರಣವನ್ನು ಪ್ರಸ್ತಾಪಿಸಿದ ಅವರು, ‘ಒಂದೆಡೆ ಇ.ಡಿ, ಸಿಬಿಐ ಮಾಜಿ ಸಚಿವರ ತನಿಖೆ ಮಾಡಲು ಮುಂದಾದಾಗ ನಿಗಮದ ಅಧ್ಯಕ್ಷರು ಎಸ್ಐಟಿ ಮುಂದೆ ಶರಣಾಗಿದ್ದಾರೆ. ಸಿದ್ದರಾಮಯ್ಯ ಅವರು ಆರೋಪಿಗಳನ್ನು ರಕ್ಷಿಸುವ ಕೆಲಸದಲ್ಲಿ ತೊಡಗಿದ್ದಾರೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.