ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಷಯದ ಕುರಿತು ಚರ್ಚಿಸಲು ಇದೇ 22ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆಯಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಂದು ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.